Sunday, August 23, 2026

BDA Apartments

Home Front Page 508 ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಶಂಕುಸ್ಥಾಪನೆ

508 ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಶಂಕುಸ್ಥಾಪನೆ

ಬೆಂಗಳೂರು, ಆಗಸ್ಟ್ 06, 2023 (www.justkannada.in): ದೇಶದ 508 ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಅಮೃತ್ ಭಾರತ್ ಸ್ಟೇಷನ್ ಯೋಜನೆಯನ್ನು ದೇಶಾದ್ಯಂತ 1309 ನಿಲ್ದಾಣಗಳನ್ನು ಪುನರಾಭಿವೃದ್ಧಿ ಮಾಡಲು ಪ್ರಾರಂಭಿಸಲಾಗಿದ್ದು, ಇದರಡಿ 508 ನಿಲ್ದಾಣಗಳ ಪುನರಾಭಿವೃದ್ಧಿಗೆ ಪ್ರಧಾನಮಂತ್ರಿಯವರು ಶಂಕುಸ್ಥಾಪನೆ ನೆರವೇರಿಸುತ್ತಿದ್ದಾರೆ.

ಈ ನಿಲ್ದಾಣಗಳನ್ನು 24,470 ಕೋಟಿ ರೂ.ಗಿಂತ ಹೆಚ್ಚು ವೆಚ್ಚದಲ್ಲಿ ಪುನರಾಭಿವೃದ್ಧಿ ಮಾಡಲಾಗುವುದು. ನಗರದ ಎರಡೂ ಬದಿಗಳ ಸರಿಯಾದ ಏಕೀಕರಣದೊಂದಿಗೆ ಈ ನಿಲ್ದಾಣಗಳನ್ನು ‘ನಗರ ಕೇಂದ್ರಗಳಾಗಿ’ ಅಭಿವೃದ್ಧಿಪಡಿಸಲು ಮಾಸ್ಟರ್ ಪ್ಲಾನ್ ಗಳನ್ನು ಸಿದ್ಧಪಡಿಸಲಾಗುತ್ತಿದೆ.

ಉತ್ತರ ಪ್ರದೇಶ ಮತ್ತು ರಾಜಸ್ಥಾನದಲ್ಲಿ ತಲಾ 55, ಬಿಹಾರದಲ್ಲಿ 49, ಮಹಾರಾಷ್ಟ್ರದಲ್ಲಿ 44, ಪಶ್ಚಿಮ ಬಂಗಾಳದಲ್ಲಿ 37, ಮಧ್ಯಪ್ರದೇಶದಲ್ಲಿ 34, ಅಸ್ಸಾಂನಲ್ಲಿ 32, ಒಡಿಶಾದಲ್ಲಿ 25, ಪಂಜಾಬ್ನಲ್ಲಿ 22, ಗುಜರಾತ್ ಮತ್ತು ತೆಲಂಗಾಣದಲ್ಲಿ ತಲಾ 21, ಜಾರ್ಖಂಡ್ನಲ್ಲಿ 20, ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ತಲಾ 18 ನಿಲ್ದಾಣಗಳು ಸೇರಿವೆ. ಹರಿಯಾಣದಲ್ಲಿ 15, ಕರ್ನಾಟಕದಲ್ಲಿ 13 ನಿಲ್ದಾಣಗಳು ಈ ಯೋಜನೆಯಡಿ ಅಭಿವೃದ್ಧಿ ಹೊಂದಲಿವೆ.