ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ಮಕ್ಕಳ ಸುರಕ್ಷತೆ, ಆತ್ಮವಿಶ್ವಾಸ ತುಂಬಲು ಆದ್ಯತೆ: ಸಚಿವ ಸುರೇಶ್ ಕುಮಾರ್

ತುಮಕೂರು, ಮೇ 31, 2020 (www.justkannada.in): ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ಮಕ್ಕಳ ಸುರಕ್ಷತೆ ಮತ್ತು ಆತ್ಮವಿಶ್ವಾಸಕ್ಕೆ ಮೊದಲ ಆದ್ಯತೆ ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಎಸ್.ಸುರೇಶ್‌ ಕುಮಾರ್ ತಿಳಿಸಿದ್ದಾರೆ.

ತುಮಕೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪೂರ್ವ ಸಿದ್ಧತೆ ಕುರಿತಂತೆ ಡಿಡಿಪಿಐ ಮತ್ತು ಬಿಇಓಗಳೊಂದಿಗೆ ಪ್ರಗತಿ ಪರೀಶೀಲನಾ ಸಭೆ ನಡೆಸಿ ನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಕುಡಿಯಲು ಮನೆಯಿಂದಲೇ ನೀರು ತರಬೇಕು. ಅವರ ಸುರಕ್ಷತೆಗೆ ಸರಕಾರ ಅಗತ್ಯ ಕ್ರಮ ವಹಿಸಲಿದೆ ಎಂದು ಹೇಳಿದರು.