ಬೆಂಗಳೂರು, ಅಕ್ಟೋಬರ್ 16,2025 (www.justkannada.in): ಸರ್ಕಾರಿ ಶಾಲೆಯ ಆವರಣ ಮತ್ತು ಸರ್ಕಾರಿ ಸಂಸ್ಥೆಗಳಿಗೆ ಸಂಬಂಧಪಟ್ಟ ಸ್ಥಳಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳಿಗೆ ನಿಷೇಧ ಹೇರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿ ಪತ್ರ ಬರೆದಿದ್ದ ಸಚಿವ ಪ್ರಿಯಾಂಕ್ ಖರ್ಗೆ ಇದೀಗ ಮತ್ತೊಂದು ಪತ್ರ ಬರೆದಿದ್ದಾರೆ.
ಸರ್ಕಾರಿ ನೌಕರರು ಮತ್ತು ಅಧಿಕಾರಿಗಳು ಆರ್ಎಸ್ಎಸ್ ಚಟುವಟಿಕೆಗಳಲ್ಲಿ ಭಾಗಿಯಾಗುವುದಕ್ಕೆ ಕಡಿವಾಣ ಹಾಕುವಂತೆ ಮನವಿ ಮಾಡಿ ಸಿಎಂ ಸಿದ್ದರಾಮಯ್ಯಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ.
ರಾಜ್ಯದಲ್ಲಿ ಸರ್ಕಾರಿ ನೌಕರರಿಗೆ ಹಲವು ನಿಯಮಗಳು ಜಾರಿಯಲ್ಲಿವೆ. ನಿಯಮ ಉಲ್ಲಂಘಿಸಿದರೆ ಶಿಸ್ತು ಕ್ರಮ ಆಗಲಿದೆ ಎಂಬ ಸುತ್ತೋಲೆ ಹೊರಡಿಸಬೇಕು. ಸಂಬಂಧಿಸಿದವರಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಸಿಎಂಗೆ ಬರೆದ ಪತ್ರದಲ್ಲಿ ಪ್ರಿಯಾಂಕ್ ಖರ್ಗೆ ಮನವಿ ಮಾಡಿದ್ದಾರೆ.
ಸರ್ಕಾರಿ ಶಾಲೆಗಳು ಮತ್ತು ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಆರ್ಎಸ್ಎಸ್ ಚಟುವಟಿಕೆಗಳನ್ನು ನಿಷೇಧಿಸುವಂತೆ ಪ್ರಿಯಾಂಕ್ ಖರ್ಗೆ ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು. ಇದಕ್ಕೆ ಆರ್ಎಸ್ಎಸ್, ಬಿಜೆಪಿ ಹಾಗೂ ಹಿಂದೂ ಸಂಘಟನೆಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು
Key words: Restrict, government employees, RSS activities, Priyank Kharge