ಅಶ್ಲೀಲ ವಿಡಿಯೋ ತೋರಿಸಿ ರಾಜಕೀಯ ಮಾಡುವ ಅವಶ್ಯಕತೆ ನನಗೆ ಇಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್

ಲಬುರ್ಗಿ,ಮೇ,2,2024 (www.justkannada.in):   ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್, ಅಶ್ಲೀಲ ವಿಡಿಯೋ ತೋರಿಸಿ ರಾಜಕೀಯ ಮಾಡುವ ಅವಶ್ಯಕತೆ ನನಗೆ ಇಲ್ಲ ಎಂದು ಹೇಳಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿ ಹೆಚ್ ಡಿಕುಮಾರಸ್ವಾಮಿಗೆ ತಿರುಗೇಟು ನೀಡಿದ  ಡಿಸಿಎಂ ಡಿ.ಕೆ ಶಿವಕುಮಾರ್, ಅಶ್ಲೀಲ ವಿಡಿಯೋ ತೋರಿಸಿ ರಾಜಕೀಯ ಮಾಡುವ ಅವಶ್ಯಕತೆ ನನಗೆ ಇಲ್ಲ. ನಾನು ಏನೇ ಇದ್ದರೂ ನೇರಾ ನೇರವಾಗಿ ಹೋರಾಟ ಮಾಡುತ್ತೇನೆ. ಇಂತಹ ಚೀಪ್ ಕೆಲಸ ಮಾಡುವವನು ನಾನಲ್ಲ ಎಂದರು.

ಪ್ರಜ್ವಲ್ ಪ್ರಕರಣದ ಬಗ್ಗೆ ಬಿಜೆಪಿ ನಾಯಕರು ಮಾತನಾಡುತ್ತಿಲ್ಲ. ಜೆಡಿಎಸ್ ಬಿಜೆಪಿ ನಾಯಕರು ಸಂತ್ರಸ್ತ ಮಹಿಳೆಯರನ್ನು ಭೇಟಿಯಾಗಲಿ. ಕೇಂದ್ರ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್ ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಶೋಭಾ ಕರಂದ್ಲಾಜೆ, ಡಿವಿ ಸದಾನಂದ ಗೌಡ, ಸುನಿಲ್ ಕುಮಾರ್, ಸಿಟಿ ರವಿ ಸೇರಿದಂತೆ ಎರಡು ಪಕ್ಷಗಳ ನಾಯಕರು ಹಾಸನಕ್ಕೆ ಹೋಗಲಿ ಸಂತ್ರಸ್ತ ಮಹಿಳೆಯರನ್ನು ಭೇಟಿಯಾಗಿ ಧೈರ್ಯವನ್ನು ತುಂಬವ ಕೆಲಸ ಮಾಡಲಿ ಎಂದು ಟಾಂಗ್ ಕೊಟ್ಟರು.

Key words: prjwal Revanna-hd kumarswamy- politics – DK Shivakumar