ಪಿ ಆರ್ ಕೆ ಪ್ರೊಡಕ್ಷನ್ಸ್‌ ಮತ್ತೊಂದು ಹೊಸ ಪ್ರಯೋಗ: ‘ಫ್ಯಾಮಿಲಿ ಪ್ಯಾಕ್’ ಮೋಷನ್ ಪೋಸ್ಟರ್ ರಿಲೀಸ್!

ಬೆಂಗಳೂರು, ಜೂನ್ 17, 2020 (www.justkannada.in): ಪಿ ಆರ್ ಕೆ ಪ್ರೊಡಕ್ಷನ್ಸ್‌ ಮತ್ತೊಂದು ಹೊಸ ಉತ್ಸಾಹಿ ತಂಡಕ್ಕೆ ಅವಕಾಶ ನೀಡಿದೆ.

ಪುನೀತ್ ರಾಜ್ ಕುಮಾರ್ ಸಂಸ್ಥೆ ಮೂಲಕ ನಿರ್ಮಾಣವಾಗುತ್ತಿರುವ ‘ಫ್ಯಾಮಿಲಿ ಪ್ಯಾಕ್’ ಚಿತ್ರದ ಮೊದಲ ಮೋಷನ್ ಪೋಸ್ಟರ್ ಬಿಡುಗಡೆಯಾಗಿದ್ದು, ಗಮನ ಸೆಳೆಯುತ್ತಿದೆ. ಈ ಚಿತ್ರದ ಚಿತ್ರೀಕರಣ ಸದ್ಯದಲ್ಲೇ ಆರಂಭವಾಗಲಿದೆ.

ಈ ಹಿಂದೆ ಸಂಕಷ್ಟಕರ ಗಣಪತಿ ಚಿತ್ರವನ್ನು ನಿರ್ದೇಶಿಸಿದ್ದ‌ ಅರ್ಜುನ್ ಕುಮಾರ್ ಎಸ್ ಈ ಚಿತ್ರಕ್ಕೆ ಆಯಕ್ಷನ್ ಕಟ್ ಹೇಳಲಿದ್ದಾರೆ. ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ಲಿಖಿತ್ ಶೆಟ್ಟಿ ಈ ಚಿತ್ರದ ನಿರ್ಮಾಪಕರು.

ನಾಯಕ‌ ಲಿಖಿತ್ ಶೆಟ್ಟಿ ಈ ಚಿತ್ರದಲ್ಲೂ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಅಮೃತ ಅಯ್ಯಂಗಾರ್ ನಾಯಕಿಯಾಗಿ ನಟಿಸಲಿದ್ದಾರೆ.