ಇಂದಿನಿಂದ ಪ್ರೊ ಕಬ್ಬಡ್ಡಿ ಹವಾ ! ತೆಲುಗು ಟೈಟನ್ಸ್- ಗುಜರಾತ್ ಜೈಂಟ್ಸ್ ಮೊದಲ ಹಣಾಹಣಿ

ಬೆಂಗಳೂರು, ಡಿಸೆಂಬರ್ 02, 2023 (www.justkannada.in): ಇಂದು ಪ್ರೊ ಕಬ್ಬಡ್ಡಿ ಪಂದ್ಯಾವಳಿಗಳಿಗೆ ಅಧಿಕೃತವಾಗಿ ಚಾಲನೆ ಸಿಗಲಿದ್ದು, ಅಹಮದಾಬಾದ್‌ನ ಟ್ರಾನ್ಸ್‌ಸ್ಟೇಡಿಯಾ ಸ್ಟೇಡಿಯಂನಲ್ಲಿ ತೆಲುಗು ಟೈಟನ್ಸ್- ಗುಜರಾತ್ ಜೈಂಟ್ಸ್ ತಂಡಗಳ ಮೊದಲ ಪಂದ್ಯ ನಡೆಯಲಿದೆ.

ಪ್ರೊ ಕಬಡ್ಡಿ ಲೀಗ್‌ ಸೀಸನ್‌ 10 ಪಂದ್ಯಾವಳಿಯನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಟಿವಿ ಚಾನೆಲ್‌ಗಳಲ್ಲಿ ವೀಕ್ಷಿಸಬಹುದಾಗಿದೆ. ಡಿಸ್ನಿ+ಹಾಟ್‌ಸ್ಟಾರ್ ಮೊಬೈಲ್ ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಲೈವ್ ಸ್ಟ್ರೀಮಿಂಗ್ ಸಹ ಆಗಲಿದೆ.

ಈ ಮೂಲಕ ಇಂದಿನಿಂದ ದೇಶದಲ್ಲಿ ಬಹುನಿರೀಕ್ಷಿತ ವಿವೋ ಪ್ರೊ ಕಬಡ್ಡಿ ಲೀಗ್‌ ಸೀಸನ್‌ 10ರ ಹವಾ ಶುರುವಾಗಲಿದೆ. ಇಂದಿನಿಂದ ಪ್ರಾರಂಭವಾಗಲಿರುವ ಪಂದ್ಯಾವಳಿಗಳು 2024ರ ಫೆಬ್ರವರಿ 21ರವರೆಗೆ ನಡೆಯಲಿವೆ.

4 ವರ್ಷಗಳ ನಂತರ ಆರಂಭವಾಗಿರುವ ಪ್ರೊ ಕಬಡ್ಡಿ ಲೀಗ್‌ನ 10ನೇ ಸೀಸನ್‌ನಲ್ಲಿ ಎಲ್ಲಾ 12 ಫ್ರಾಂಚೈಸಿಗಳು ತಮ್ಮ ತವರಿನ ಅಂಗಳದಲ್ಲಿ ಆಡಲು ಸಿದ್ಧವಾಗಿವೆ.