Saturday, August 15, 2026

BDA Apartments

Home Crime ಬೆಂಗಳೂರಿನಲ್ಲಿ ಪಾಕ್ ಪರ ಅಮೂಲ್ಯ ಘೋಷಣೆ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ಕಾರ್ಯಕ್ರಮ ಆಯೋಜಕರಿಗೆ ಸೂಚನೆ…

ಬೆಂಗಳೂರಿನಲ್ಲಿ ಪಾಕ್ ಪರ ಅಮೂಲ್ಯ ಘೋಷಣೆ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ಕಾರ್ಯಕ್ರಮ ಆಯೋಜಕರಿಗೆ ಸೂಚನೆ…

ಬೆಂಗಳೂರು,ಫೆ,21,2020(www.justkannada.in): ಬೆಂಗಳೂರಿನಲ್ಲಿ ಪಾಕ್ ಪರ ಅಮೂಲ್ಯ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಕಾರ್ಯಕ್ರಮ ಆಯೋಜಕರಿಗೆ ಉಪ್ಪಾರಪೇಟೆ ಠಾಣಾ ಪೊಲೀಸರು ಸೂಚನೆ ನೀಡಿದ್ದಾರೆ.

ನಗರದ ಫ್ರೀಡಂಪಾರ್ಕ್ ನಲ್ಲಿ ಸಿಎಎ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ಪಾಕ್ ಪರ ಘೋಷಣೆ ಕೂಗಿದ್ದ ಅಮೂಲ್ಯ ವಿರುದ್ದ ಅಕ್ರೋಶ ವ್ಯಕ್ತವಾಗಿದೆ. ಈ ನಡುವೆ  ಕಾರ್ಯಕ್ರಮ ಆಯೋಜಿಸಿದ್ದ ಆಯೋಜಕರಿಗೆ ವಿಚಾರಣೆಗೆ ಹಾಜರಾಗುವಂತೆ ಉಪ್ಪಾರಪೇಟೆ ಠಾಣಾ ಪೊಲೀಸರು ಸೂಚನೆ ನೀಡಿದ್ದಾರೆ.

ಜೆಡಿಎಸ್ ಕಾರ್ಪೋರೇಟರ್ ಇಮ್ರಾನ್ ಪಾಷಾ ಸೇರಿ ಹಲವರಿಗೆ ಸೂಚನೆ ನೀಡಲಾಗಿದೆ ಎನ್ನಲಾಗಿದೆ. ಇನ್ನು ಪಾಕ್ ಪರ ಘೋಷಣೆ ಕೂಗಿದ ಅಮೂಲ್ಯ ನಡೆಯನ್ನ ಆಕೆಯ ತಂದೆಯವರೇ ಖಂಡಿಸಿದ್ದಾರೆ.

Key words:  Pro-Pak- case Bengaluru-Instruct – program Organizer – attend – hearing