Monday, October 5, 2026

BDA Apartments

ಮತ್ತೆ ಜೆಡಿಎಸ್ ಪಕ್ಷ ವಿಸರ್ಜನೆ ಮಾತುಗಳನ್ನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರ...
Home Front Page ಪಾಕ್ ಪರ ಘೋಷಣೆ ಪ್ರಕರಣ: ಅಮೂಲ್ಯ ಗಡಿಪಾರು ಮಾಡುವಂತೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ…

ಪಾಕ್ ಪರ ಘೋಷಣೆ ಪ್ರಕರಣ: ಅಮೂಲ್ಯ ಗಡಿಪಾರು ಮಾಡುವಂತೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ…

ಬೆಂಗಳೂರು,ಫೆ,21,2020(www.justkannada.in):  ಬೆಂಗಳೂರಿನಲ್ಲಿ ಅಮೂಲ್ಯ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೂಲ್ಯ ಗಡಿಪಾರು ಮಾಡುವಂತೆ ಆಗ್ರಹಿಸಿ ಬೆಂಗಳೂರು ನಗರ ಕಾಂಗ್ರೆಸ್ ಘಟಕ ಪ್ರತಿಭಟನೆ ನಡೆಸಿತು.

ನಗರದ ಮೌರ್ಯ ಸರ್ಕಲ್ ಬಳಿಗೆ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಪಾಕ್ ಪರ ಘೋಷಣೆ ಕೂಗಿದ ಅಮೂಲ್ಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ಕಿಡಿಗೇಡಿ ಅಮೂಲ್ಯ ಎಂದು ಘೋಷಣೆ ಕೂಗಿ ಅಮೂಲ್ಯ ಪೋಟೋಗೆ ಚಪ್ಪಲಿಯಿಂದ ಹೊಡೆದು ಧರಣಿ ನಡೆಸಿದರು.

ಅಲ್ಲದೆ ಪಾಕ್ ಪರ ಘೋಷಣೆ ಕೂಗಿದ ಅಮೂಲ್ಯ ಗಡಿಪಾರು ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ನಡೆದ ಸಿಎಎ ವಿರೋಧಿ ಪ್ರತಿಭಟನೆ ಸಮಾರಂಭದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿದ ಅಮೂಲ್ಯಳಿಗೆ  14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Key words: Pro-Pak – case- Congress -protests -bangalore