ಪಾಕ್ ಪರ ಘೋಷಣೆ ಕೇಸ್: ಮೂವರು ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ..

ಹುಬ್ಬಳ್ಳಿ,ಫೆ,17,2020(www.justkannada.in): ಹುಬ್ಬಳ್ಳಿಯ ಕೆಎಲ್ ಇ ಕಾಲೇಜಿನಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

ಕಳೆದ ಎರಡು ದಿನಗಳ ಹಿಂದಷ್ಟೆ ಹುಬ್ಬಳ್ಳಿಯ ಕೆಎಲ್ ಇ ಕಾಲೇಜಿನಲ್ಲಿ ಜಮ್ಮಕಾಶ್ಮೀರ ಮೂಲದ ವಿದ್ಯಾರ್ಥಿಗಳಾದ  ಅಮೀರ್, ಬಾಸಿತ್, ತಾಲಿಬ್  ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದರು. ಈ ವಿಡಿಯೋ ಸಾಕಷ್ಟು ವೈರಲ್ ಆಗಿತ್ತು. ನಂತರ ಮೂವರು ವಿದ್ಯಾರ್ಥಿಗಳನ್ನ ಪೊಲೀಸರು ಬಂಧಿಸಿ ಬಿಡುಗಡೆ ಮಾಡಿದ್ದರು. ಬಿಡುಗಡೆ ಮಾಡಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ಈ ಹಿನ್ನೆಲೆ ಪೊಲೀಸರು ನಿನ್ನೆ ರಾತ್ರಿ ಮೂವರು ಆರೋಪಿಗಳನ್ನ ಬಂಧಿಸಿ ಇಂದು ಹುಬ್ಬಳ್ಳಿಯ 3ನೇ ಜೆಎಂಎಫ್ ಸಿ ಕೋರ್ಟ್ ಗೆ ಹಾಜರು ಪಡಿಸಿದ್ದರು.  ಜೆಎಂಎಫ್ ಸಿ ಕೋರ್ಟ್ ನ್ಯಾಯಾಧೀಶೆ ಜೆ.ಪುಷ್ಪಾ ಅವರು ಮೂವರು ಆರೋಪಿಗಳೀಗೆ ಮಾರ್ಚ್ 2ರವರೆಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

Key words: Pro-Pak –Proclamation- Case- 14 days-judicial custody – three accused.