Sunday, September 20, 2026

BDA Apartments

Home Front Page ಪಾಕ್ ಪರ ಘೋಷಣೆ ಕೂಗಿದ್ದು FSL ವರದಿಯಲ್ಲಿ ದೃಢ: ಮೂವರ ಬಂಧನ-ಗೃಹ ಸಚಿವ ಡಾ.ಜಿ.ಪರಮೇಶ್ವರ್.

ಪಾಕ್ ಪರ ಘೋಷಣೆ ಕೂಗಿದ್ದು FSL ವರದಿಯಲ್ಲಿ ದೃಢ: ಮೂವರ ಬಂಧನ-ಗೃಹ ಸಚಿವ ಡಾ.ಜಿ.ಪರಮೇಶ್ವರ್.

ಬೆಂಗಳೂರು,ಮಾರ್ಚ್,5,2024(www.justkannada.in): ವಿಧಾನಸೌಧ ಆವರಣದಲ್ಲಿ  ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದು ಎಫ್ಎಸ್ ಎಲ್ ವರದಿಯಲ್ಲಿ ದೃಢಪಟ್ಟಿದ್ದು, ಪ್ರಕರಣ ಸಂಬಂಧ ಮೂವರನ್ನ ಬಂಧಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

ಈ ಕುರಿತು ಇಂದು ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್,  ನಾವು ಎಫ್ ಎಸ್ ಎಲ್  ವರದಿ ಬರಲಿ ಎಂದು ಹೇಳಿದ್ವಿ. ಎಫ್ ಎಸ್ ಎಲ್ ವರದಿ ಆಧರಿಸಿ  ಕ್ರಮ ಕೈಗೊಡಿದ್ದೇವೆ. ಪಾಕಿಸ್ತಾನ್ ಜಿಂದಾಬಾದ್  ಎಂದು ಘೋಷಣೆ ಕೂಗಿದ್ದು ದೃಢಪಟ್ಟಿದೆ.  ಹೀಗಾಗಿ  ಎಫ್ ಎಸ್ ಎಲ್ ವರದಿ ಆಧರಿಸಿ ಮೂವರನ್ನ ಬಂಧಿಸಲಾಗಿದೆ. ವರದಿಯಲ್ಲಿ ಯಾರು ಘೋಷಣೆ ಕೂಗಿದ್ದಾರೆಂದು ಹೇಳಿಲ್ಲ. ಯಾಕೆ ಕೂಗಿದ್ದಾರೆಂದು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು. ಪಾಕ್ ಪರ ಘೋಷಣೆ ಕೂಗಿದ್ದು FSL ವರದಿಯಲ್ಲಿ ದೃಢ parameshwar

ಸರ್ಕಾರಕ್ಕೆ ಮುಜುಗರ ಆಗೋ ಪ್ರಶ್ನೆ ಏನಿದೆ.  ಮುಲಾಜಿಲ್ಲದೆ ಕ್ರಮ ಕೈಗೊಂಡಿದ್ದೇವೆ. ಪೊಲೀಸ್ ಅಧಿಕಾರಿಗಳ ಲೋಪ ಇದ್ರೆ ಕ್ರಮ ಖಚಿತ ಎಂದರು.

ವಿರೋಧ ಪಕ್ಷದವರು ಸುಮ್ಮನೆ ಹೇಳುತ್ತಾರೆ. ಅವರು ಹೇಳ್ತಾರೆ ಎಂದು ಅರೆಸ್ಟ್ ಮಾಡೋಕೆ ಆಗುತ್ತಾ..?  ನಾವು ಎಫ್ ಎಸ್ ಎಲ್ ವರದಿ ಬರಲಿ ಅಂತಾ ಕಾಯುತ್ತಿದ್ದವು. ಈಗ ಬಂದಿದೆ. ಕ್ರಮಕೈಗೊಂಡಿದ್ದೇವೆ ಎಂದು ಪರಮೇಶ್ವರ್ ತಿಳಿಸಿದರು.

Key words: Pro-Pak- sloganeering -confirmed – FSL- report-Home Minister- Dr. G. Parameshwar.