ಕಡಿಮೆಯಾಗದ ಹಿಜಾಬ್-ಕೇಸರಿ ಶಾಲು ಸಂಘರ್ಷ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಷೇಧಾಜ್ಞೆ ಮುಂದುವರಿಕೆ

ಬೆಂಗಳೂರು, ಫೆಬ್ರವರಿ 20, 2022 (www.justkannaa.in): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳ ಪ್ರದೇಶದಲ್ಲಿ ನಿಷೇಧಾಜ್ಞೆಯನ್ನು ಫೆ.26 ವರೆಗೂ ಮುಂದುವರೆಸಲು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

ರಾಜ್ಯಾದ್ಯಂತ ಹಿಜಾಬ್, ಕೇಸರಿ ಶಾಲು ಸಂಘರ್ಷ ಮುಂದುವರೆದಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳ ಪ್ರದೇಶದಲ್ಲಿ ನಿಷೇಧಾಜ್ಞೆಯನ್ನು ಫೆ.26 ವರೆಗೂ ಮುಂದುವರೆಸಲು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳ ಪ್ರದೇಶದಲ್ಲಿ ನಿಷೇಧಾಜ್ಞೆಯನ್ನು ಮುಂದುವರಿಸಲಾಗುತ್ತಿದೆ.

ಫೆ.26ವರೆಗೂ ಈ ಆದೇಶವನ್ನು ಮುಂದುವರೆಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆವಿ ರಾಜೇಂದ್ರ ಆದೇಶ ಹೊರಡಿಸಿದ್ದಾರೆ.