Tuesday, September 29, 2026

BDA Apartments

ಕೆಜಿ ಹಳ್ಳಿ, ಡಿಜೆ ಹಳ್ಳಿ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಮುಂ...
Home Crime ಕೆಜಿ ಹಳ್ಳಿ, ಡಿಜೆ ಹಳ್ಳಿ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಮುಂದುವರಿಕೆ

ಕೆಜಿ ಹಳ್ಳಿ, ಡಿಜೆ ಹಳ್ಳಿ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಮುಂದುವರಿಕೆ

ಬೆಂಗಳೂರು, ಆಗಸ್ಟ್ 16, 2020 (www.justkannada.in): ಕೆಜಿಹಳ್ಳಿ ಮತ್ತು ಡಿಜೆಹಳ್ಳಿ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಇನ್ನೂ ಎರಡು ದಿನಗಳ ಕಾಲ ನಿಷೇಧಾಜ್ಞೆ ವಿಸ್ತರಿಸಲಾಗಿದೆ.

ಈ ಸಂಬಂಧ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಆದೇಶ ಹೊರಡಿಸಿದ್ದಾರೆ. ಈ ಠಾಣೆಗಳ ವ್ಯಾಪ್ತಿಯಲ್ಲಿ ಗಲಭೆ ನಡೆದ ಆಗಸ್ಟ್ 11ರ ಬೆಳಗ್ಗೆ 6 ಗಂಟೆಯಿಂದ ಇಂದು ಬೆಳಗ್ಗೆ 6 ಗಂಟೆವರೆಗೆ ನಿಷೇಧಾಜ್ಞೆ ವಿಸಲಾಗಿತ್ತು.

ಪರಿಸ್ಥಿತಿ ಇನ್ನೂ ಬಿಗುವಿನಿಂದ ಕೂಡಿರುವುದರಿಂದ ಆಗಸ್ಟ್ 18ರ ಬೆಳಗ್ಗೆ 6 ಗಂಟೆವರೆಗೆ ನಿಷೇಧಾಜ್ಞೆಯನ್ನು ಮುಂದುವರಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಎರಡಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ ಹಾಗೂ ಅನಗತ್ಯವಾಗಿ ಸಂಚರಿಸುವಂತಿಲ್ಲ. ಯಾವುದೇ ಮೆರವಣಿಗೆ ಮತ್ತು ಸಭೆಗಳನ್ನು ನಡೆಸುವುದು, ಸ್ಪೋಟಕ ವಸ್ತುಗಳನ್ನು ಸಿಡಿಸುವುದು, ಮಾರಕಾಸ್ತ್ರಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ.