ಇಸ್ರೋದ ಪ್ರತಿ ಯೋಜನೆಗೂ ಕರ್ನಾಟಕದ ಕೊಡುಗೆ  ಇರುತ್ತೆ: ಚಂದ್ರಯಾನ-3ಕ್ಕೂ ಕರುನಾಡಿನ ಕಾಣಿಕೆ ಅಪಾರ- ಮಾಜಿ ಸಿಎಂ ಹೆಚ್.ಡಿಕೆ.

ಬೆಂಗಳೂರು,ಜುಲೈ,14,2023(www.justkannada.in):  ಇಸ್ರೋ ಮಹತ್ವಾಕಾಂಕ್ಷೆಯ ಚಂದ್ರಯಾನ-3 ನೌಕೆ ಯಶಸ್ವಿಯಾಗಿ ಉಡಾವಣೆಯಾದ ಹಿನ್ನೆಲೆ , ಇಸ್ರೋ ವಿಜ್ಞಾನಿಗಳ ತಂಡಕ್ಕೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಹೆಚ್.ಡಿ ಕುಮಾರಸ್ವಾಮಿ, ನಮೆಲ್ಲರ ಕನಸು, ನಿರೀಕ್ಷೆಗಳು ಚಂದ್ರನೆಡೆಗೆ ಸಾಗುತ್ತಿವೆ. ಭಾರತ ಹೆಮ್ಮೆಪಡುತ್ತದೆ. 45 ದಿನಗಳ ಐತಿಹಾಸಿಕ ಚಂದ್ರಯಾನ-3 ಯಶಸ್ವಿಯಾಗಿ ಆರಂಭವಾಗಿದೆ. 2.35ಕ್ಕೆ ಆಂಧ್ರದ ಶ್ರೀಹರಿಕೋಟಾದಿಂದ ಚಂದಿರನ ಅಂಗಳಕ್ಕೆ ನೌಕೆಯನ್ನು ಉಡ್ದಯನ ಮಾಡಿದ  ಇಸ್ರೋ ಈ ಪ್ರಯತ್ನದಲ್ಲಿ ಪೂರ್ಣ ಯಶಸ್ಸು ಸಾಧಿಸಲಿದೆ ಎಂಬ ವಿಶ್ವಾಸ ನನ್ನದು ಎಂದಿದ್ದಾರೆ.

ಇಸ್ರೋದ ಪ್ರತಿ ಯೋಜನೆಗೂ ಕರ್ನಾಟಕದ ಕೊಡುಗೆ ಇರುತ್ತದೆ. ಅದೇ ರೀತಿ, ಚಂದ್ರಯಾನ-3ಕ್ಕೂ ಕರುನಾಡಿನ ಕಾಣಿಕೆ ಅಪಾರ. ಈ ಜಗತ್ತು, ಭಾರತವನ್ನು ಕರ್ನಾಟಕದ ಮೂಲಕ ನೋಡುವ ಈ ಅವಿಸ್ಮರಣೀಯ ಕ್ಷಣದ ದೃಶ್ಯವನ್ನು ನಾನೂ ಕಣ್ತುಂಬಿಕೊಂಡೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಉಡಾವಣೆಯಾದ ಕೆಲ ಕ್ಷಣಗಳಲ್ಲೇ ಚಂದ್ರಯಾನ-3 ನೌಕೆ ನಿಗದಿತ ಕಕ್ಷೆ ಸೇರಿದ್ದು, ಈ ಮೂಲಕ ಉಪಗ್ರಹವನ್ನು ಚಂದ್ರನ ಮೇಲೆ ಇಳಿಸುವ 6 ವಾರಗಳ ರೋಮಾಂಚನಕಾರಿ ಮಿಷನ್ ‘ಗೆ ಚಾಲನೆ ದೊರೆತಿದೆ. ಇಸ್ರೋ ಅಧ್ಯಕ್ಷ ಡಾ.ಸೋಮನಾಥ್ ಸೇರಿ ಅವರ ತಂಡದ ಎಲ್ಲಾ ವಿಜ್ಞಾನಿಗಳು, ತಾಂತ್ರಿಕ ನಿಪುಣರು, ಇತರೆ ಎಲ್ಲರಿಗೂ ನನ್ನ ಹೃತ್ಪೂರ್ವಕ ಅಭಿನಂದನೆಗಳು ಎಂದು ಹೆಚ್.ಡಿಕೆ ಟ್ವಿಟ್ ಮಾಡಿದ್ದಾರೆ.

Key words:project – ISRO –Karnataka- contribution-Chandrayaan-3-Former CM -H.D Kumaraswamy