5ಸಾವಿರ ಕೋಟಿ ರೂ. ಹೂಡಿಕೆಯ 1 ಸಾವಿರ ಮೆಗಾವ್ಯಾಟ್ ಮರುಬಳಕೆ ವಿದ್ಯುತ್ ಉತ್ಪಾದನೆ ಯೋಜನೆಗೆ ಅಂಕಿತ

ಬೆಂಗಳೂರು,ಮೇ,10,2025 (www.justkannada.in): ಸಾರ್ವಜನಿಕ ಸ್ವಾಮ್ಯದ ಭಾರತೀಯ ಅನಿಲ ಪ್ರಾಧಿಕಾರವು (ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್- ಜಿಎಐಎಲ್) ರಾಜ್ಯದಲ್ಲಿ ಮುಂದಿನ ಐದು ವರ್ಷಗಳಲ್ಲಿ 5,000 ಕೋಟಿ ರೂಪಾಯಿ ಹೂಡಿಕೆಯೊಂದಿಗೆ 1,000 ಮೆಗಾವಾಟ್ (1 ಗಿಗಾವಾಟ್) ಉತ್ಪಾದನಾ ಸಾಮರ್ಥ್ಯದ ಮರುಬಳಕೆ ಇಂಧನ ಸ್ಥಾವರಗಳನ್ನು ಆರಂಭಿಸುವ ಒಡಂಬಡಿಕೆಗೆ ಶುಕ್ರವಾರ ಅಂಕಿತ ಹಾಕಲಾಯಿತು.

ವಿಧಾನಸೌಧದಲ್ಲಿ ನಡೆದ ಸಮಾರಂಭದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌.ಬಿ ಪಾಟೀಲ್, ಇಂಧನ ಸಚಿವ ಕೆ ಜೆ ಜಾರ್ಜ್, ಕ್ರೆಡಲ್ ಅಧ್ಯಕ್ಷ ಟಿ.ಡಿ ರಾಜೇಗೌಡ ಅವರ ಸಮ್ಮುಖದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ಜಿಐಎಎಲ್ ಕಾರ್ಯಕಾರಿ  ನಿರ್ದೇಶಕ ಪರಿವೇಶ್ ಛುಗ್ ಸಿಂಗ್ ಅವರು ಪರಸ್ಪರ ಒಪ್ಪಂದಕ್ಕೆ ಸಹಿ ಹಾಕಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಎಂ.ಬಿ ಪಾಟೀಲ್, ಅನಿಲ ಪ್ರಾಧಿಕಾರವು ರೈತರಿಂದ ಜಮೀನನ್ನು ಭೋಗ್ಯಕ್ಕೆ ಪಡೆದುಕೊಂಡು ಯೋಜನೆ ಆರಂಭಿಸಬಹುದು. ಅಥವಾ ಕೆಐಎಡಿಬಿ ಮೂಲಕ ಬೇಕಾದರೂ ಅಗತ್ಯ ಜಮೀನು ಒದಗಿಸಲಾಗುವುದು.

ಈ ಯೋಜನೆಗೆ ಅಗತ್ಯವಿರುವ ಭೂಮಿ, ಅನುಮತಿ, ಇತ್ಯಾದಿಗಳನ್ನು ತ್ವರಿತವಾಗಿ ಒದಗಿಸಲಾಗುವುದು.  ಎಂದು ಭರವಸೆ ನೀಡಿದರು.

ಮರುಬಳಕೆ ಇಂಧನ ಕ್ಷೇತ್ರದಲ್ಲಿ ಗರಿಷ್ಠ ಪ್ರಮಾಣದ ಹೂಡಿಕೆ ಆಗುವಂತೆ ನಾವು ನೋಡಿಕೊಳ್ಳಲಿದ್ದೇವೆ. ಇದು ರಾಜ್ಯದ ಕೈಗಾರಿಕಾ ಬೆಳವಣಿಗೆಗೆ ನಿರ್ಣಾಯಕವಾಗಿದೆ. ನಮ್ಮಲ್ಲಿರುವ ಕಾರ್ಯ ಪರಿಸರ, ಕೌಶಲ್ಯ ಪೂರ್ಣ ಮಾನವ ಸಂಪನ್ಮೂಲ ಮತ್ತು ಭೂಮಿಯ ಲಭ್ಯತೆಗಳಿಂದಾಗಿ ಪರಿಸರಸ್ನೇಹಿ ಇಂಧನ ಕ್ಚೇತ್ರದ ಹೂಡಿಕೆಗೆ ಕರ್ನಾಟಕವು ಪ್ರಶಸ್ತ ತಾಣವಾಗಿದೆ ಎಂದು ಅವರು ಒತ್ತಿ ನುಡಿದಿದ್ದಾರೆ.

ಇಂಧನ ಸಚಿವ ಕೆ ಜೆ ಜಾರ್ಜ್ ಮಾತನಾಡಿ, ಅನಿಲ ಪ್ರಾಧಿಕಾರವು ರಾಜ್ಯ ಸರ್ಕಾರದ ಜತೆ ಈ ಮಹತ್ವದ ಒಡಂಬಡಿಕೆ ಮಾಡಿಕೊಂಡಿರುವುದು ಭಾರತದ ಪರಿಸರಸ್ನೇಹಿ ಇಂಧನ ವಲಯದ ಸಾಧನೆಗೆ ಮತ್ತಷ್ಟು ಬಲ ತಂದುಕೊಡಲಿದೆ. ಪಾವಗಡದಲ್ಲಿರುವ ಸೋಲಾರ್ ಪಾರ್ಕಿನಲ್ಲಿ ವರ್ಷಕ್ಕೆ 2,050 ಮೆಗಾವಾಟ್ ಸೌರ ಮತ್ತು ಪವನ ವಿದ್ಯುತ್ ಉತ್ಪಾದಿಸಲಾಗುತ್ತಿದೆ. ಅಲ್ಲಿನ ರೈತರು ಈ ಯೋಜನೆಗೆ ಇನ್ನೂ 10 ಸಾವಿರ ಎಕರೆ ಭೂಮಿ ಬಿಟ್ಟುಕೊಡಲು ಮುಂದೆ ಬಂದ ಮೇಲೆ ಈ ಯೋಜನೆಯನ್ನು ವಿಸ್ತರಿಸಲು ತೀರ್ಮಾನಿಸಲಾಗಿದೆ ಎಂದರು. ರಾಜ್ಯದಲ್ಲಿ ಇದರಿಂದ ಉದ್ಯೋಗ ಸೃಷ್ಟಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ಎರಡೂ ಈಡೇರಲಿದೆ ಎಂದರು.

ಇದು ಜಿಐಎಲ್ (ಗೈಲ್) ಜತೆಗಿನ ರಾಜ್ಯ ಸರ್ಕಾರದ ದೀರ್ಘಕಾಲೀನ ಬಾಂಧವ್ಯದ ಆರಂಭವಾಗಿದೆ. ಈ ಮೂಲಕ ರಾಜ್ಯದ ಆರ್ಥಿಕ ಅಭಿವೃದ್ಧಿ ಮತ್ತು ಹವಾಮಾನಕ್ಕೆ ಸಂಬಂಧಿಸಿದ ಗುರಿಗಳನ್ನು ಸಾಧಿಸಬಹುದು ಎಂದು ಅವರು ಅಭಿಪ್ರಾಯ ಪಟ್ಟರು.

ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಮಹೇಶ, ಗೇಲ್ ಕಾರ್ಯನಿರ್ವಾಹಕ ನಿರ್ದೇಶಕ (ಮಾರುಕಟ್ಟೆ) ಸುಮಿತ್ ಕಿಶೋರ, ಕ್ರೆಡೆಲ್ ವ್ಯವಸ್ಥಾಪಕ ನಿರ್ದೇಶಕ ರುದ್ರಪ್ಪಯ್ಯ ಸೇರಿದಂತೆ ಇತರರು ಉಪಸ್ಥಿತರಿದ್ದರು.

ENGLISH SUMMARY…

Rs 5,000 Crore to Be Invested in Renewable Energy Projects

Karnataka, GAIL Ink MoU to Develop 1 GW of Renewable Energy

Bengaluru: The Government of Karnataka and GAIL (India) Limited, the country’s leading public sector enterprise in the natural gas sector, signed a Memorandum of Understanding (MoU) on Friday to establish approximately 1 GW of renewable energy (RE) capacity in the state. The proposed investment for this initiative is pegged at Rs 5,000 crore.

The MoU was signed in the presence of M.B. Patil, Minister for Large and Medium Industries and Infrastructure Development; K.J. George, Minister for Energy; and T.D. Rajegowda, Chairman of the Karnataka Renewable Energy Development Ltd (KREDL).
Dr. Selvakumar S., Principal Secretary, Industries Department, and Parivesh Chugh Singh, Executive Director (SD & Renewables), GAIL, signed the agreement on behalf of the state government and GAIL respectively.

Speaking on the occasion, Minister M.B. Patil said the MoU reaffirms Karnataka’s position as a preferred destination for investments in clean and sustainable energy. “GAIL can initiate the projects by acquiring land from farmers on a lease basis or we will facilitate land allocation through KIADB. Necessary approvals, registration, and concessions will be provided swiftly,” he assured.

He further stated that the MoU enables GAIL to explore and develop a diversified renewable energy portfolio, including ground-mounted solar, rooftop solar, floating solar, wind energy, and mandated storage solutions. “GAIL is also keen to acquire suitable land parcels within solar parks in Karnataka to accelerate project implementation under its dedicated capital expenditure plan,” the Minister added.

Welcoming GAIL’s strategic interest in Karnataka, Patil emphasised that the state’s favourable policy framework, skilled workforce, and land availability make it an ideal partner for companies focused on sustainability.

Minister K.J. George remarked that this partnership would strengthen Karnataka’s standing as a green energy hub, while also generating employment and boosting infrastructure development. He added that the MoU marks the beginning of a long-term collaboration between GAIL and the Government of Karnataka to build a cleaner, greener energy future that contributes meaningfully to the state’s economic growth and climate objectives.

Highlighting the state’s solar potential, the Minister noted that the Pavagada Solar Park is already producing 2,050 MW of energy annually, and local farmers are ready to provide an additional 10,000 acres of land for a similar project.

Gunjan Krishna, Commissioner for Industrial Development, Dr Mahesh, CEO, KIADB, Sumit kishor, Executive Director (marketing), GAIL, K.P.Rudrappaiah MD Kredel was also present on the occasion.

Key words: 1,000 MW, renewable, power generation, project, signed