ಲೋಕಸಭೆ ಚುನಾವಣೆಯಲ್ಲಿ ರಾಜ್ಯದಿಂದ 20 ಸ್ಥಾನ ನೀಡುವ ಭರವಸೆ ಕೊಟ್ಟಿದ್ದೇವೆ – ಡಿಸಿಎಂ ಡಿ.ಕೆ ಶಿವಕುಮಾರ್.

ನವದೆಹಲಿ,ಆಗಸ್ಟ್,3,2023(www.justkannada.in):  ಲೋಕಸಭಾ ಚುನಾವಣೆ ಸಿದ್ಧತೆ ಬಗ್ಗೆ ಚರ್ಚೆ ನಡೆದಿದೆ. ರಾಜ್ಯದಿಂದ ಕನಿಷ್ಠ 20 ಸ್ಥಾನ ಗೆಲ್ಲುವುದಾಗಿ ಹೈಕಮಾಂಡ್​ಗೆ ಭರವಸೆ ನೀಡಿದ್ದೇವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ಎಐಸಿಸಿ ಕಚೇರಿಯಲ್ಲಿ  ಹೈಕಮಾಂಡ್ ಸಭೆ ಬಳಿಕ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್​  ಕರ್ನಾಟಕದಲ್ಲಿ ಒಗ್ಗಟ್ಟಿನ ಪ್ರದರ್ಶನವಾಗಿದೆ. ರಾಜ್ಯದ ಜನರಿಗೆ ಕೊಟ್ಟ ಮಾತಿನಂತೆ ನಡೆದಿದ್ದೇವೆ. ನುಡಿದಂತೆ ನಡೆದಿದ್ದೇವೆ. ವಿಧಾನಸಭೆ ಚುನಾವಣೆ ಮಾದರಿ ಲೋಕಸಭೆ ಚುನಾವಣೆ ಎದುರಿಸುತ್ತೇವೆ. ರಾಜ್ಯದಿಂದ I.N.D.I.Aಗೆ 20 ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದೇವೆ ಎಂದು ತಿಳಿಸಿದರು.

Key words: promised -20 seats – state – LokSabha -elections – DCM- DK Shivakumar.