ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ತರುವ ಭರವಸೆ ನೀಡಿದ್ದೇನೆ- ಸೋನಿಯಾ ಗಾಂಧಿ ಭೇಟಿ ಬಳಿಕ ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿಕೆ…

ನವದೆಹಲಿ,ಅ,16,2019(www.justkannada.in): ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿಗೆ ಭರವಸೆ ನೀಡಿದ್ದೇನೆ.‌ ಹೈಕಮಾಂಡ್ ನನ್ನ ಮೇಲೆ ನಂಬಿಕೆ ಇಟ್ಟು ಪ್ರತಿಪಕ್ಷ ನಾಯಕ ಸ್ಥಾನ ನೀಡಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ್ದೇನೆ‌ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ತಿಳಿಸಿದರು.

ಇಂದು ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಅವರನ್ನ ಮಾಜಿ ಸಿಎಂ ಸಿದ್ಧರಾಮಯ್ಯ ಭೇಟಿ ಮಾಡಿ ಚರ್ಚೆ ನಡೆಸಿದರು. ಈ ವೇಳೆ  ಕಾಂಗ್ರೆಸ್ ಪಕ್ಷವನ್ನ ಸಂಘಟಿಸುವತ್ತ ಗಮನ ಹರಿಸಿ. ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ಬಗ್ಗೆ ಗೊಂದಲ ಬೇಡ ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡಿ  ಗರಿಷ್ಠ ಸೀಟುಗಳನ್ನ ಗೆಲ್ಲುವಂತೆ ಸಿದ್ಧರಾಮಯ್ಯಗೆ  ಸೋನಿಯಾ ಗಾಂಧಿ ಸೂಚನೆ ನೀಡಿದ್ದಾರೆ.

ಸೋನಿಯಾ ಗಾಂಧಿ ಭೇಟಿ ಬಳಿಕ ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ಹೈಕಮಾಂಡ್ ನನ್ನ ಮೇಲೆ ನಂಬಿಕೆ ಇಟ್ಟು ಪ್ರತಿಪಕ್ಷ ನಾಯಕ ಸ್ಥಾನ ನೀಡಿರುವುದಕ್ಕೆ ಕೃತಜ್ಞತೆ ಸಲ್ಲಿಸಲು ದೆಹಲಿಗೆ ಬಂದಿದ್ದೆ. ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿಗೆ ಭರವಸೆ ನೀಡಿದ್ದೇನೆ ಎಂದರು.

ಅನರ್ಹ ಶಾಸಕರನ್ನು ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಸೇರಿಸುವ ಪ್ರಶ್ನೆಯೇ ಇಲ್ಲ. ಪಕ್ಷದ ಸಿದ್ದಾಂತ ಒಪ್ಪಿ ಯಾರು ಬೇಕಾದರೂ ಕಾಂಗ್ರೆಸ್ ಸೇರಬಹುದು ಎಂದು ಹೇಳಿದ್ದೆ. ಆದರೆ, ಮೈತ್ರಿ ಸರ್ಕಾರ ಪತನಗೊಳಿಸಿದ ಅನರ್ಹ ಶಾಸಕರನ್ನು‌ ಮತ್ತೆ ಪಕ್ಷಕ್ಕೆ ಯಾವ ಕಾರಣಕ್ಕೂ ಸೇರ್ಪಡೆ ಮಾಡುವುದಿಲ್ಲ. ಅನರ್ಹರಿಗೆ ಮತ್ತೆ ಪ್ರವೇಶವಿಲ್ಲ ಎಂದು ಸಿದ್ಧರಾಮಯ್ಯ ತಿಳಿಸಿದರು.

Key words:  promised -bring- Congress -power-Former CM Siddaramaiah- -meeting- Sonia Gandhi