ಧರ್ಮದ ವಿಚಾರದಲ್ಲಿ ಪ್ರಚಾರ ಮಾಡಿದಕ್ಕೆ ಬಿಜೆಪಿಗೆ ಯಶಸ್ಸು ಸಿಗಲಿಲ್ಲ- ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಟೀಕೆ…

ಬೆಳಗಾವಿ,ಫೆ,13,2020(www.justkannada.in):  ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಧರ್ಮದ ಹೆಸರಿನಲ್ಲಿ ಪ್ರಚಾರ ಮಾಡಿತ್ತು. ಹೀಗಾಗಿ ಬಿಜೆಪಿಗೆ ಯಶಸ್ಸು ಸಿಕ್ಕಿಲ್ಲ. ಒಡೆದು ಆಳುವ ರಾಜಕಾರಣಕ್ಕೆ ಮುಂದಾಗಿದ್ದಕ್ಕೆ ಬಿಜೆಪಿಗೆ ಸೋಲಾಗಿದೆ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.

ಬೆಳಗಾವಿಯಲ್ಲಿ ಇಂದು ಮಾತನಾಡಿದ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ದೆಹಲಿ ಚುನಾವಣೆಯಲ್ಲಿ ನಮ್ಮ ಪ್ರಯತ್ನ ನಾವು ಮಾಡಿದ್ದೇವೆ. ಚುನಾವಣೆ ಅಂದ ಮೇಲೆ ಸೋಲು, ಗೆಲುವು ಸಹಜ. ನಮ್ಮ ಕಡೆಯಿಂದ ಪ್ರಯತ್ನ ಆಗಿದೆ. ಕಾಂಗ್ರೆಸ್ ಸೋಲಿನ ಬಗ್ಗೆ ವರ್ಕಿಂಗ್ ಕಮಿಟಿಯಲ್ಲಿ ಚರ್ಚೆ ಮಾಡಲಾಗುತ್ತದೆ ಎಂದು ತಿಳಿಸಿದರು.

ಕಾಂಗ್ರೆಸ್ ಯಾವುದೇ ಕಳಂಕ ಇಲ್ಲದೇ ಕೆಲಸ ಮಾಡಿದ್ದೇವೆ. ಆದರೆ ಮೋದಿ ಜನರನ್ನು ಭಾವನಾತ್ಮಕವಾಗಿ ಸೆಳೆಯಲು ಯತ್ನಿಸಿದರು. ಅಪಪ್ರಚಾರ ಮಾಡಿ ಅಧಿಕಾರಕ್ಕೆ ಬಂದರು. ಇನ್ನೂ ಕೆಲವು ಸಲ ಅಭಿವೃದ್ಧಿ ಇಲ್ಲದೆ ಅಜೆಂಡಾ ಮೇಲೆ ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಗುಡಗಿದರು.

Key words: promoting- religion- BJP – not successful –  Congress leader – Mallikarjuna kharge