Wednesday, August 12, 2026

BDA Apartments

Home Front Page ಹೆಚ್.ಡಿಕೆ ಸೇರಿ ನಾಲ್ವರ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿ-ರಾಜ್ಯಪಾಲರಿಗೆ ‘ಕೈ’ ನಾಯಕರಿಂದ ದೂರು

ಹೆಚ್.ಡಿಕೆ ಸೇರಿ ನಾಲ್ವರ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿ-ರಾಜ್ಯಪಾಲರಿಗೆ ‘ಕೈ’ ನಾಯಕರಿಂದ ದೂರು

ಬೆಂಗಳೂರು,ಆಗಸ್ಟ್, 31,2024 (www.justkannada.in): ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಮಾಜಿ ಸಚಿವ ಮುರುಗೇಶ್ ನಿರಾಣಿ, ಜನಾರ್ದನ ರೆಡ್ಡಿ, ಶಶಿಕಲಾ ಜೊಲ್ಲೆ ಅವರ ವಿರುದ್ಧವೂ ಪ್ರಾಸಿಕ್ಯೂಷನ್ ಗೆ  ಅನುಮತಿ ನೀಡುವಂತೆ ಕಾಂಗ್ರೆಸ್ ನಾಯಕರು  ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೆ ದೂರು ನೀಡಿದರು.

ಸಿಎಂ ಸಿದ್ದರಾಮಯ್ಯ,  ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ , ಸಚಿವರು ಮತ್ತು ಕಾಂಗ್ರೆಸ್ ಶಾಸಕರು ‘ರಾಜಭವನ ಚಲೋ’  ಮೂಲಕ ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೂಟ್ ಅವರನ್ನು ಭೇಟಿಯಾಗಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ,  ಮುರುಗೇಶ್ ನಿರಾಣಿ, ಜನಾರ್ದನ ರೆಡ್ಡಿ, ಶಶಿಕಲಾ ಜೊಲ್ಲೆ ವಿರುದ್ದಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ದೂರು ನೀಡಿದರು.

ಈ ವೇಳೆ ಉಳಿದ ಪ್ರಕರಣಗಳ ಬಗ್ಗೆ ಗಮನ ಹರಿಸುವುದಾಗಿ  ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಭರವಸೆ ನೀಡಿದ್ದಾರೆ ಎನ್ನಲಾಗಿದೆ.

Key words: prosecution, Complaint, congress, Governor