ಅರಬ್ಬಿ ಸಮುದ್ರದಲ್ಲಿ ಸಿಲುಕಿದ್ದ 9 ಮಂದಿ ಕಾರ್ಮಿಕರ ರಕ್ಷಣೆ: ಸಿಎಂ ಬಿಎಸ್ ವೈ ಧನ್ಯವಾದ….

ಬೆಂಗಳೂರು,ಮೇ,17,2021(www.justkannada.in): ಅರಬ್ಬೀ ಸಮುದ್ರದಲ್ಲಿ ಟಗ್ ನಲ್ಲಿ ಸಿಲುಕಿದ್ದ 9 ಮಂದಿ ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದ್ದು, ಕಾರ್ಯಾಚರಣೆ ನಡೆಸಿದ ಕೋಸ್ಟ್ ಗಾರ್ಡ್ ಹಾಗೂ ನೌಕಾಪಡೆಗೆ ಸಿಎಂ ಬಿಎಸ್ ಯಡಿಯೂರಪ್ಪ ಧನ್ಯವಾದ ಹೇಳಿದ್ಧಾರೆ.jk

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬಿಎಸ್ ಯಡಿಯೂರಪ್ಪ, ಅರಬ್ಬೀ ಸಮುದ್ರದಲ್ಲಿ ಟಗ್ ನಲ್ಲಿ ಸಿಲುಕಿದ್ದ 9 ಮಂದಿ ಕಾರ್ಮಿಕರನ್ನು ರಕ್ಷಿಸಲಾಗಿದ್ದು, ಕಾರ್ಯಾಚರಣೆ ನಡೆಸಿದ ಕೋಸ್ಟ್ ಗಾರ್ಡ್ ಹಾಗೂ ನೌಕಾಪಡೆಗೆ ಧನ್ಯವಾದಗಳು. ಇಂದು ಮುಂಜಾನೆಯಿಂದ ರಕ್ಷಣಾ ಕಾರ್ಯಾಚರಣೆ ನಡೆಸಿ ಎಲ್ಲರನ್ನೂ ರಕ್ಷಿಸಲಾಗಿದೆ. ಕಾರ್ಮಿಕರ ಆರೋಗ್ಯದ ತಪಾಸಣೆ ಸೇರಿದಂತೆ ಎಲ್ಲ ಅಗತ್ಯ ನೆರವು ಒದಗಿಸಲಾಗುತ್ತಿದೆ ಎಂದಿದ್ದಾರೆ.

ತೌಕ್ತೆ ಚಂಡಮಾರುತದ ಅಬ್ಬರದಿಂದಾಗಿ ಸಮುದ್ರದಲ್ಲಿ ಉಂಟಾದ ಅಲೆಗಳ ಹೊಡೆತಕ್ಕೆ ಸಿಲುಕಿ ನಿನ್ನೆ ಎನ್‌ಎಂಪಿಟಿ ಬೋಟ್ ಸಮುದ್ರದಲ್ಲಿ ಮುಗುಚಿ ದುರಂತಕ್ಕೀಡಾಗಿತ್ತು. ಬೋಟ್ ನಲ್ಲಿದ್ದ ಇಬ್ಬರು ಈಜಿ ದಡ ಸೇರಿದ್ದರು. ಬೋಟ್ ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ 9 ಮಂದಿಯನ್ನ ಇದೀಗ ರಕ್ಷಣೆ ಮಾಡಲಾಗಿದೆ.

Key words: Protection -9 Labor- Arabian Sea-CM BS Yeddyurappa- thank