ಅಗ್ನಿಪಥ್ ಯೋಜನೆ ವಿರೋಧಿಸಿ ಪ್ರತಿಭಟನೆ: ರೈಲುಗಳಿಗೆ ಬೆಂಕಿ: ಪೊಲೀಸ್ ಫೈರಿಂಗ್ ಗೆ ಓರ್ವ ಬಲಿ.

ಸಿಕಂದರಬಾದ್/ಪಾಟ್ನಾ,ಜೂನ್,17,2022(www.justkannada.in):  ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಅಗ್ನಿಪಥ್ ಯೋಜನೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿದ್ದು, ಬಿಹಾರ, ತೆಲಂಗಾಣದಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.

ಅಗ್ನಿಪಥ ಯೋನೆಯನ್ನು ಹಿಂಪಡೆಯುವಂತೆ ಆಗ್ರಹಿಸಿ ಬಿಹಾರ, ಉತ್ತರ ಪ್ರದೇಶ, ಮಧ್ಯಪ್ರದೇಶ, ಹರಿಯಾಣ, ಆಂಧ್ರ ಪ್ರದೇಶ, ತಮಿಳುನಾಡು ಸೇರಿದಂತೆ ಸುಮಾರು 9 ರಾಜ್ಯಗಳಲ್ಲಿ ನಡೆಸುತ್ತಿರುವ ಹೋರಾಟ ಉಗ್ರ ರೂಪ ತಾಳಿದೆ.  ರೈಲು, ಬಸ್​ಗಳಿಗೆ ಕಲ್ಲು ತೂಟ ನಡೆಸಿ, ಬೆಂಕಿ ಹಚ್ಚಿ ಆಕ್ರೋಶ ಹೊರಹಾಕುತ್ತಿದ್ದಾರೆ. ಅಪಾರ ಪ್ರಮಾಣದ ಸಾರ್ವಜನಿಕ ಆಸ್ತಿ-ಪಾಸಿ ಹಾನಿಯಾಗಿದೆ.

ತೆಲಂಗಾಣದ  ಸಿಕಂದರಾಬಾದ್ ​ ನಲ್ಲಿ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದು ಈ ವೇಳೆ ಯುವಕನೊಬ್ಬ ಮೃತಪಟ್ಟಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

ಅಗ್ನಿಪಥ್ ಯೋಜನೆ ವಿರೋಧಿಸಿ ಸಿಕಂದರಾಬಾದ್ ರೈಲ್ವೆ ನಿಲ್ದಾಣದಲ್ಲಿ ದೊಡ್ಡ ಪ್ರಮಾಣದ ಹಿಂಸಾಚಾರ  ನಡೆದಿದ್ದು ರೈಲುಗಳಿಗೆ ಬೆಂಕಿಹಚ್ಚಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ತೆಲಂಗಾಣ ರಾಜ್ಯಾದ್ಯಂತ 70 ರೈಲುಗಳ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಸಿಂಕಂದರಬಾದ್ ವಿಭಾಗಿಯ ರೈಲ್ವೆ ಮ್ಯಾನೇಜರ್ ಮಾಹಿತಿ ನೀಡಿದ್ದಾರೆ.

Key words: Protest-against-Agnipath-project