ರಸ್ತೆ ಗುಂಡಿ ಮುಚ್ಚದ ಬಿಬಿಎಂಪಿ ವಿರುದ್ಧ ಅಣುಕು ಶವಯಾತ್ರೆ ನಡೆಸುವ ಮೂಲಕ ಪ್ರತಿಭಟನೆ.

 

ಬೆಂಗಳೂರು,ನವೆಂಬರ್,26,2021(www.justkannada.in): ಬೆಂಗಳೂರಿನಲ್ಲಿ ರಸ್ತೆಗುಂಡಿ ಮುಚ್ಚದ ಹಿನ್ನೆಲೆಯಲ್ಲಿ ಬಿಬಿಎಂಪಿಯ ಪ್ರತಿಕೃತಿ ಅಣುಕು ಶವಯಾತ್ರೆ ನಡೆಸುವ ಮೂಲಕ ಹಲವು ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಗರದ ಸುಂಕದ ಕಟ್ಟೆ ಬಸ್ ನಿಲ್ದಾಣದ ಬಳಿ ಜಮಾಯಿಸಿದ ಪ್ರತಿಭಟನಾಕಾರರು ಬಿಬಿಎಂಪಿ ಪ್ರತಿಕೃತಿಯ ಅಣುಕು ಶವಯಾತ್ರೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಕೃತಿ ರಸ್ತೆಯ ಗುಂಡಿಗೆ ಹಾಕಿ ಮಡಿಕೆ ಒಡೆದು  ತಲೆಬೋಳಿಸುವ ಬಿಬಿಎಂಪಿ ವಿರುದ್ಧ ಪ್ರತಿಭಟನೆ ನಡೆಸಿದರು.

ಬೆಂಗಳೂರಿನಲ್ಲಿ ರಸ್ತೆಗುಂಡಿಗಳು ಹೆಚ್ಚಾಗಿದ್ದು ಅಪಘಾತಕ್ಕೆ ಕಾರಣವಾಗುತ್ತಿವೆ. ಹೀಗಾಗಿ ಬಿಬಿಎಂಪಿ ವಿರುದ್ಧ ಸ್ಥಳೀಯರು ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

Key words: Protest – against -BBMP – close –road