ಕೇಂದ್ರದ ವಿರುದ್ದ ಪ್ರತಿಭಟನೆ: ರಾಜ್ಯದ ಸಂಸದರಿಗೆ ಸಿಎಂ ಸಿದ್ದರಾಮಯ್ಯ ಪತ್ರ.

ಬೆಂಗಳೂರು,ಫೆಬ್ರವರಿ,6,2024(www.justkannada.in):  ರಾಜ್ಯಕ್ಕೆ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಧೋರಣೆ ವಿರೋಧಿಸಿ ನಾಳೆ ನವದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರ ಫೆಬ್ರವರಿ 7(ನಾಳೆ) ಪ್ರತಿಭಟನೆಗೆ ಮುಂದಾಗಿದ್ದು ಈ ಹಿನ್ನೆಲೆಯಲ್ಲಿ ರಾಜ್ಯದ ಸಂಸದರಿಗೆ  ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ಈ ಸಂಬಂಧ ರಾಜ್ಯದ ಸಂಸದರಿಗೆ ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ, ಎಲ್ಲರೂ ನಾಳಿನ ಪ್ರತಿಭಟನೆಯಲ್ಲಿ ಎಲ್ಲರೂ ಭಾಗಿಯಾಗುವಂತೆ ರಾಜ್ಯದ ಸಂಸದರಿಗೆ  ಮನವಿ ಮಾಡಿದ್ದಾರೆ. ಕನ್ನಡಿಗರಿಗೆ ನಿರಂತರವಾಗಿ ಅನ್ಯಾಯವಾಗುತ್ತಿದೆ, ನಮ್ಮ ಸ್ವಾಭಿಮಾನಿ ಹೋರಾಟಕ್ಕೆ ಎಲ್ಲರೂ ಬೆಂಬಲ ನೀಡಿ ಎಂದು ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಉತ್ತರದ ರಾಜ್ಯಗಳಿಗೆ ಅನುದಾನ ಕೊಡಬೇಡಿ ಎಂದು ಹೇಳುವುದಿಲ್ಲ. ಆದರೆ ದಕ್ಷಿಣ ರಾಜ್ಯಗಳಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸಿ. ಚಿನ್ನದ ಮೊಟ್ಟೆ ಇಡುವ ಕೋಳಿ ಎಂದು ಕತ್ತು ಕುಯ್ಯಬಾರದು, ಹಾಲು ಕೊಡುವ ಕೆಚ್ಚಲನ್ನೇ ಕತ್ತರಿಸಬಾರದು ಎನ್ನುವುದು ನಮ್ಮ ಮನವಿ. ನಮ್ಮ ನಿರಂತರ ಬೇಡಿಕೆ, ಮನವಿಗಳಿಗೂ ಕೇಂದ್ರ ಬೆಲೆ ಕೊಟ್ಟಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.

Key words: Protest- against- Centre-CM Siddaramaiah- letter – state- MPs