Sunday, September 20, 2026

BDA Apartments

ನೂತನ ಶಿಕ್ಷಣ ನೀತಿ ವಿರೋಧಿಸಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ...
Home Front Page ನೂತನ ಶಿಕ್ಷಣ ನೀತಿ ವಿರೋಧಿಸಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್

ನೂತನ ಶಿಕ್ಷಣ ನೀತಿ ವಿರೋಧಿಸಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್

ಬೆಂಗಳೂರು,ಸೆಪ್ಟಂಬರ್,154,2021(www.justkannada.in):   ನೂತನ ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿ  ವಿರೋಧೀಸಿ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ವಿದ್ಯಾರ್ಥಿಗಳು ವಿಧಾನಸೌಧ ಮುತ್ತಿಗೆ ಹಾಕಲು ಮುಂದಾಗಿದ್ದು, ಈ ಸಮಯದಲ್ಲಿ  ಪೊಲೀಸರು ವಿದ್ಯಾರ್ಥಿಗಳನ್ನು ತಡೆದಿದ್ದಾರೆ.

ಈ ನಡುವೆ ವಿದ್ಯಾರ್ಥಿಗಳು ಮತ್ತು ಪೊಲೀಸರ ನಡುವೆ ಮಾತಿನಚಕಮಕಿ ನಡೆದಿದೆ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗುತ್ತಿದ್ದಂತೆ ಪ್ರತಿಭಟನಾನಿರತ ವಿದ್ಯಾರ್ಥಿಗಳನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.

Key words: Protest- against -new education policy- Laticharge -police -students