ಶಕ್ತಿ ಯೋಜನೆ ವಿರೋಧಿಸಿ ಆಟೋ ಚಾಲಕರ ಪ್ರತಿಭಟನೆ: ಮನವಿ ಸ್ವೀಕರಿಸಿದ ಸಚಿವ ಸಂತೋಷ್ ಲಾಡ್.

ಹುಬ್ಬಳ್ಳಿ,ಜುಲೈ,31,2023(www.justkannada.in):  ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ  ​​​​ಶಕ್ತಿ ಯೋಜನೆ ವಿರೋಧಿಸಿ ಇಂದು ಹುಬ್ಬಳ್ಳಿಯಲ್ಲಿ ಆಟೋ ಚಾಲಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನೆಲೆ ಅವಳಿ ನಗರದಲ್ಲಿ ಆಟೋ ಸಂಚಾರ ಬಂದ್​ ಇರಲಿದೆ.

ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಆಟೋ ಸಂಚಾರಕ್ಕೆ ನಿಷೇಧವಿದೆ. ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ಆಟೋ ಚಾಲಕರು ಜಮಾಯಿಸಿ ಧರಣಿ ನಡೆಸುತ್ತಿದ್ದಾರೆ. ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಯುತ್ತಿದ್ದು,  ನೂರಾರು ಆಟೋ ಚಾಲಕರು, ಮಾಲೀಕರು ಪ್ರತಿಭಟನೆ ಪಾಲ್ಗೊಂಡಿದ್ದಾರೆ.

ಶಕ್ತಿ ಯೋಜನೆಯನ್ನು ರದ್ದು ಮಾಡಿ, ನಮ್ಮನ್ನ ರಕ್ಷಿಸಿ ಎಂದು ಆಗ್ರಹಿಸಿ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆ ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಆಟೋ ಸಂಚಾರ ಸಂಪೂರ್ಣ ಬಂದ್ ಆಗಿದೆ.

ಆಟೋಚಾಲಕರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮನವಿ ಆಲಿಸಿ ಮಾತನಾಡಿದ ಸಚಿವ ಸಂತೋಷ್ ಲಾಡ್, ಸರ್ಕಾರದ ಪ್ರತಿನಿಧಿಯಾಗಿ ನಾನು ಮನವಿ ಸ್ವೀಕರಿಸಿದ್ದೇನೆ. ಆಟೋ ಚಾಲಕರ ಸಮಸ್ಯೆಯನ್ನು ಸರ್ಕಾರದ ಗಮನಕ್ಕೆ ತರುತ್ತೇನೆ.  ಈ ಬಗ್ಗೆ ಸಿಎಂ ಮತ್ತು ಸಾರಿಗೆ ಸಚಿವರು ಚರ್ಚಿಸಿ ನಿರ್ಧಾರ ತೆಗೆದುಕೊಳ್ಳೂತ್ತಾರೆ ಎಂದರು.

Key words: Protest – auto drivers -against -Shakti Yojana-hubli