Saturday, October 3, 2026

BDA Apartments

ಆಸ್ಟ್ರೇಲಿಯಾ ಕಾಡ್ಗಿಚ್ಚಿನಲ್ಲಿ ಸಂತ್ರಸ್ತರಿಗೆ ನೆರವಾಗಲು ಟೆನಿಸ್ ಪಂದ್ಯ:...
Home Front Page ವಿಪಕ್ಷಗಳ ಧರಣಿ ಮುಂದುವರೆದ ಹಿನ್ನೆಲೆ: ವಿಧಾನ ಸಭೆ, ವಿಧಾನ ಪರಿಷತ್ ಕಲಾಪ ನಾಳೆಗೆ ಮುಂದೂಡಿಕೆ

ವಿಪಕ್ಷಗಳ ಧರಣಿ ಮುಂದುವರೆದ ಹಿನ್ನೆಲೆ: ವಿಧಾನ ಸಭೆ, ವಿಧಾನ ಪರಿಷತ್ ಕಲಾಪ ನಾಳೆಗೆ ಮುಂದೂಡಿಕೆ

ಬೆಂಗಳೂರು,ಜುಲೈ,24,2024 (www.justkannada.in):  ಮುಡಾ ಹಗರಣ ಕುರಿತು ಸದನದಲ್ಲಿ ಚರ್ಚೆಗೆ ಅವಕಾಶ ನೀಡುವಂತೆ ಆಗ್ರಹಿಸಿ ವಿಪಕ್ಷಗಳಾದ ಬಿಜೆಪಿ, ಜೆಡಿಎಸ್ ಪ್ರತಿಭಟನೆ ಮುಂದುವರೆದ ಹಿನ್ನೆಲೆಯಲ್ಲಿ ವಿಧಾನ ಸಭೆ, ವಿಧಾನ ಪರಿಷತ್ ಕಲಾಪವನ್ನ ನಾಳೆಗೆ ಮುಂದೂಡಿಕೆ ಮಾಡಲಾಗಿದೆ.

ವಿಧಾಣಸಭೆಯಲ್ಲಿ ವಿಪಕ್ಷ ಸದಸ್ಯರು ಪ್ರತಿಭಟನೆ ಮುಂದುವರೆಸಿದ ಹಿನ್ನೆಲೆಯಲ್ಲಿ ಸ್ಪೀಕರ್ ಯುಟಿ ಖಾದರ್ ಕಲಾಪವನ್ನ ನಾಳೆಗೆ ಮುಂದೂಡಿಕೆ ಮಾಡಿದರು.  ಹಾಗೆಯೇ ವಿಧಾನಪರಿಷತ್ ನಲ್ಲೂ ವಿಪಕ್ಷ ಬಿಜೆಪಿ, ಜೆಡಿಎಸ್ ಸದಸ್ಯರು ಪ್ರತಿಭಟನೆ ಮುಂದುವರೆಸಿದ ಹಿನ್ನೆಲೆಯಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಕಲಾಪವನ್ನ ನಾಳೆ ಬೆಳಿಗ್ಗೆ 10.30ಕ್ಕೆ ಮುಂದೂಡಿಕೆ ಮಾಡಿದರು.

ಇನ್ನು ಮುಡಾ ಹಗರಣ ಕುರಿತು ಚರ್ಚೆಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಬಿಜೆಪಿ, ಜೆಡಿಎಸ್ ಸದಸ್ಯರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.

Key words: protest, bjp, jds,  Adjournment, session