Friday, September 18, 2026

BDA Apartments

ಮನ್ ರೇಗಾ ಹೆಸರು ಬದಲಾವಣೆ ಖಂಡಿಸಿ ನಾಳೆ ಧರಣಿ- ಸಿಎಂ ಸಿದ್ದರಾಮಯ್ಯ BDA JK_Adv BDA Adv
Home Front Page ಮನ್ ರೇಗಾ ಹೆಸರು ಬದಲಾವಣೆ ಖಂಡಿಸಿ ನಾಳೆ ಧರಣಿ- ಸಿಎಂ ಸಿದ್ದರಾಮಯ್ಯ

ಮನ್ ರೇಗಾ ಹೆಸರು ಬದಲಾವಣೆ ಖಂಡಿಸಿ ನಾಳೆ ಧರಣಿ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜನವರಿ,26,2026 (www.justkannada.in): ಮನ್ ರೇಗಾ ಯೋಜನೆಯ ಹೆಸರನ್ನು  ವಿಬಿ ಜೀ ರಾಮ್ ಜೀ ಎಂದು ಬದಲಾವಣೆ ಮಾಡಿದ ಕೇಂದ್ರ ಸರ್ಕಾರದ ನಡೆ ವಿರುದ್ದ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸುತ್ತಿದೆ. ಈ ಮಧ್ಯೆ ನಾಳೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆಗೆ ಮುಂದಾಗಿದೆ.

ಈ ಕುರಿತು ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಮನ್ ರೇಗಾ ಯೋಜನೆಯ ಹೆಸರು ಬದಲಾವಣೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ದ ನಾಳೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಧರಣಿ ಮಾಡುತ್ತೇವೆ. ಕೇಂದ್ರ ಸರ್ಕಾರದ ನಡೆ ಖಂಡಿಸಿ ನಾಳೆ ಹೋರಾಟ ನಡೆಸುತ್ತೇವೆ.  ನಾಳಿನ ಹೋರಾಟದಲ್ಲಿ ರಣದೀಪ್ ಸಿಂಗ್ ಸುರ್ಜೇವಾಲ ಭಾಗಿಯಾಗಬಹುದು ಎಂದರು.

Key words: Protest, tomorrow, condemn, MGNREGA, CM Siddaramaiah