ದಾವಣಗೆರೆ,ಫೆಬ್ರವರಿ,18,2026 (www.justkannada.in): ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಮಾರ್ಚ್ 5 ರಂದು ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್. ಮಂಜುನಾಥ್ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಂಜುನಾಥ್, ಈ ಹಿಂದಿನ ಸರ್ಕಾರಕ್ಕಿಂತ ಈಗಿನ ಸರ್ಕಾರದಲ್ಲಿ ಹೆಚ್ಚು ಕಮಿಷನ್ ಕೊಡಬೇಕು. ಈ ಹಿಂಧೆ ಕೆಂಪಣ್ಣರನ್ನ ಬಳಸಿಕೊಂಡು ಅಧಿಕಾರಕ್ಕೆ ಬಂದರು. ಈಗ ಹಿಂದಿನ ಸರ್ಕಾರಕ್ಕಿಂತ ಹೆಚ್ಚು ಕಮಿಷನ್ ಕೊಡುವ ಸ್ಥಿತಿ ಬಂದಿದೆ ಸರ್ಕಾರದಿಂದ ಬರೊಬ್ಬರಿ 37 ಸಾವಿರ ಕೋಟಿ ರೂ. ಬಾಕಿ ಬಿಲ್ ಬರಬೇಕಿದೆ ಎಂದರು.
ಬಾಕಿ ಬಿಲ್ ಪಾವತಿಗೆ ಒತ್ತಾಯಿಸಿ ಮಾರ್ಚ್ 5 ರಂದು ಗುತ್ತಿಗೆದಾರರು ಕೆಲಸ ಸ್ಥಗಿತಗೊಳಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಮಾಡಲು ತೀರ್ಮಾನಿಸಲಾಗಿದೆ. ಖಜಾನೆಯಾಗಿದೆಯೋ ಇಲ್ಲವೋ ಅದು ನಮಗೆ ಗೊತ್ತಿಲ್ಲ ನಮಗೆ ಬಾಕಿ ಬಿಲ್ ಪಾವತಿಸಬೇಕು ಎಂದು ಮಂಜುನಾಥ್ ಆಗ್ರಹಿಸಿದರು.
Key words: Demand, release, pending bills, Protest, contractors, March 5th







