Thursday, July 30, 2026

BDA Apartments

Home Front Page ಮೈಸೂರು ವಿವಿ ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥರ ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ…

ಮೈಸೂರು ವಿವಿ ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥರ ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ…

ಮೈಸೂರು,ಮಾರ್ಚ್,9,2021(www.justkannada.in):  ಮೈಸೂರು ವಿಶ್ವ ವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ  ವೆಂಕಟೇಶ್  ಅವರ ವಿರುದ್ಧ ಜಾತಿನಿಂದನೆ ಆರೋಪ ಕೇಳಿ ಬಂದಿದ್ದು,  ಅವರನ್ನ ಅಮಾನತು ಮಾಡುವಂತೆ ಆಗ್ರಹಿಸಿ  ಡಾ ಬಿ.ಆರ್ ಅಂಬೇಡ್ಕರ್ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಹಿತರಕ್ಷಣಾ ವೇದಿಕೆ ಮತ್ತು ಕರ್ನಾಟಕ ವಿದ್ಯಾರ್ಥಿ ವೇದಿಕೆಯಿಂದ ಪ್ರತಿಭಟನೆ ನಡೆಸಲಾಯಿತು.jk

ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥರಾದ ವೆಂಕಟೇಶ್ ರಿಂದ  ಸಹೋದ್ಯೋಗಿ ಡಾ. ಮದಿಹಲಗನಗೆ ಜಾತಿ ನಿಂದನೆ ಮಾಡಿದ್ದಾರೆಂದು ಆರೋಪಿಸಿ ಜಿಲ್ಲಾಧಿಕಾರಿ ಕಚೇರಿ ಬಳಿ ಡಾ ಬಿ.ಆರ್ ಅಂಬೇಡ್ಕರ್ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಹಿತರಕ್ಷಣಾ ವೇದಿಕೆ ಮತ್ತು ಕರ್ನಾಟಕ ವಿದ್ಯಾರ್ಥಿ ವೇದಿಕೆ ವತಿಯಿಂದ ಪ್ರತಿಭಟನೆ ನಡೆಯಿತು.protest-demand-suspension-head-physical-education-department-mysore-university

ಈ ಕುರಿತು ದೂರು ದಾಖಲಾಗಿದ್ಧರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ವಿವಿ ಕುಲಪತಿ ಮತ್ತು ಅಧಿಕಾರಿಗಳ ವಿರುದ್ಧ ಪ್ರತಿಭಟನಾಕಾರರು ಘೋಷಣೆ ಕೂಗಿ  ಆಕ್ರೋಶ ವ್ಯಕ್ತಪಡಿಸಿದರು. ಘಟನೆ ಕುರಿತು ವಿ.ವಿ. ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೆಂಕಟೇಶ್ ರನ್ನು ಈ ಕೂಡಲೇ ಕೆಲಸದಿಂದ ವಜಾ ಮಾಡಬೇಕೆಂದು ಪ್ರತಿಭಟನಕಾರರು ಒತ್ತಾಯಿಸಿದರು.

Key words: Protest –demand- suspension -head – physical education- department –mysore university