Friday, October 30, 2026

Dasara Wishes

Happy Dasara
Home Front Page ಎಲ್ಲಾ ಪದವಿ ವಿದ್ಯಾರ್ಥಿಗಳಿಗೂ ಲ್ಯಾಪ್‌ಟಾಪ್ ವಿತರಿಸುವಂತೆ ಆಗ್ರಹಿಸಿ ಪ್ರತಿಭಟನೆ…

ಎಲ್ಲಾ ಪದವಿ ವಿದ್ಯಾರ್ಥಿಗಳಿಗೂ ಲ್ಯಾಪ್‌ಟಾಪ್ ವಿತರಿಸುವಂತೆ ಆಗ್ರಹಿಸಿ ಪ್ರತಿಭಟನೆ…

ಮೈಸೂರು,ಫೆ,19,2020(www.justkannada.in): ಎಲ್ಲಾ ಪದವಿ ವಿದ್ಯಾರ್ಥಿಗಳಿಗೂ ಲ್ಯಾಪ್‌ಟಾಪ್ ವಿತರಿಸುವಂತೆ ಒತ್ತಾಯಿಸಿ ಮೈಸೂರಿನಲ್ಲಿ ವಿದ್ಯಾರ್ಥಿಗಳು  ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಜಮಾಯಿಸಿದ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆ ಸಹಯೋಗದಲ್ಲಿ ಪ್ರತಿಭಟನೆ ನಡೆಸಿ ಎಲ್ಲಾ ಪದವಿ ವಿದ್ಯಾರ್ಥಿಗಳಿಗೂ ಲ್ಯಾಪ್‌ಟಾಪ್ ವಿತರಿಸುವಂತೆ ಆಗ್ರಹಿಸಿದರು. ಪ್ರತಿಭಟನೆಯಲ್ಲಿ ನೂರಾರು ವಿದ್ಯಾರ್ಥಿಗಳು ಭಾಗಿಯಾಗಿದ್ದರು.

ಎರಡನೇ ವರ್ಷ, ಮೂರನೇ ವರ್ಷದ ವಿದ್ಯಾರ್ಥಿಗಳಿಗೂ ಲ್ಯಾಪ್ ಟಾಪ್ ನೀಡಬೇಕು.  ಉಚಿತ ಲ್ಯಾಪ್‌ಟಾಪ್ ವಿತರಣೆ ವಿಳಂಬವಾಗುತ್ತಿದೆ ಆದಷ್ಟು ಬೇಗ ಲ್ಯಾಪ್‌ಟಾಪ್ ವಿತರಣೆ ಮಾಡಬೇಕು. ಈ ಬಾರಿ ಮೊದಲ ವರ್ಷದ ಪದವಿ ವಿದ್ಯಾರ್ಥಿಗಳಿಗೆ ನೀಡಿರುವ ಲ್ಯಾಪ್‌ಟಾಪ್ ಕಳಪೆ ಗುಣಮಟ್ಟದ್ದಾಗಿದೆ. ಹೀಗಾಗು ಉತ್ತಮ ಗುಣಮಟ್ಟದ ಲ್ಯಾಪ್‌ಟಾಪ್ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನಾನಿರತ ವಿದ್ಯಾರ್ಥಿಗಳು ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

Key words: Protest –demanding- laptop -distribution -all graduate- students-mysore