ಮೀಸಲಾತಿ ಮೂಲಭೂತ ಹಕ್ಕಲ್ಲ ಎಂಬ ಸುಪ್ರೀಂ ಆದೇಶಕ್ಕೆ ರಿ ಪಿಟಿಷನ್ ಹಾಕುವಂತೆ ಒತ್ತಾಯಿಸಿ ಪ್ರತಿಭಟನೆ….

ಮೈಸೂರು,ಫೆ,15,2020(www.justkannada.in): ಮೀಸಲಾತಿ ಮೂಲಭೂತ ಹಕ್ಕಲ್ಲ. ಮೀಸಲಾತಿ ಆಯಾ ರಾಜ್ಯ ಸರ್ಕಾರದ ವಿವೇಚನೆಗೆ ಬಿಟ್ಟದ್ದು ಎಂಬ ಸುಪ್ರೀಂ ಕೋರ್ಟ್ ತೀರ್ಪು ನೀಡುವ ಹಿನ್ನೆಲೆ, ಸುಪ್ರೀಂ ಆದೇಶಕ್ಕೆ ರಿ ಪಿಟಿಷನ್ ಹಾಕುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ಗಾಂಧಿ ವೃತ್ತದಲ್ಲಿ ಶಾಸಕ ಯತೀಂದ್ರ ಸಿದ್ದರಾಮಯ್ಯ, ಮಾಜಿ ಸಚಿವ ಎಚ್ ಸಿ ಮಹದೇವಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸುಪ್ರೀಂಕೋರ್ಟ್ ತೀರ್ಪು ಕುರಿತು ಶೀಘ್ರವಾಗಿ ಸುಪ್ರೀಂಕೋರ್ಟ್ ಗೆ ರಿ ಪಿಟಿಷನ್ ಸಲ್ಲಿಸಬೇಕು. ಕೆಂದ್ರ ಸರ್ಕಾರ ಸುಪ್ರೀಂ ತೀರ್ಪನ್ನು ಮರು ಪರಿಶೀಲಿಸುವಂತೆ ಮನವಿ ಮಾಡಬೇಕು ಎಂದು ಒತ್ತಾಯಿಸಿದರು.

ಸುಪ್ರೀಂ ತೀರ್ಪುನಿಂದ ಪ.ಜಾತಿ, ಪ.ಪಂಗಡಗಳು ಹಾಗೂ ಹಿಂದುಳಿದ ವರ್ಗಗಳಿಗೆ ಸಾಕಷ್ಟು ತೊಂದರೆ ಆಗುತ್ತಿದೆ. ಸಮಾನತೆ ಇದು ದೊಡ್ಡ ಹೊಡೆತ. ಕೇಂದ್ರ ಬಿಜೆಪಿ ಸರ್ಕಾರ ಸಾಮಾಜಿಕ ನ್ಯಾಯದ ವಿರುದ್ಧವಾಗಿದೆ. ಕೇಂದ್ರ ಸರ್ಕಾರ ಕೂಡಲೇ ಮೀಸಲಾತಿ ಕೊಡಲೇ ಬೇಕು ಎನ್ನುವ ಕಾನೂನ ತರಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

Key words: Protest- demanding- re-petition -Supreme Court -order –congress