ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ಮೈಸೂರಿನಲ್ಲಿ ಪ್ರತಿಭಟನೆ….

ಮೈಸೂರು,ಜೂ,13,2020(www.justkannada.in): ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ಮೈಸೂರಿನಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಯಿತು.Protest –farmer- Mysore - Land Acquisition Act -amendment

ನಗರದ  ಕೋರ್ಟ್ ಎದುರಿನ ಗಾಂಧಿ ಪ್ರತಿಮೆ ಬಳಿ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಇಲಾಖೆ ಹೊರಡಿಸಿದ ಭೂಸ್ವಾಧೀನ ಪ್ರತಿ ಸುಟ್ಟು ಹಾಕಿ ರೈತರು ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರದ ವಿವಿಧ ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಭೂಸ್ವಾಧಿನ ಕಾಯ್ದೆಗೆ ತಿದ್ದುಪಡಿ ಮಾಡಬಾರದು ಮತ್ತು  ತಮಿಳುನಾಡಿಗೆ ನೀರು ಬಿಡದಂತೆ ರೈತರು ಒತ್ತಾಯಿಸಿದರು.

Key words: Protest –farmer- Mysore – Land Acquisition Act -amendment