Tuesday, August 4, 2026

BDA Apartments

Home Front Page ಬೆಲೆ ಏರಿಕೆ ಖಂಡಿಸಿ ದಿಲ್ಲಿಯಲ್ಲಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ನೇತೃತ್ವದಲ್ಲಿ ಪ್ರತಿಭಟನೆ

ಬೆಲೆ ಏರಿಕೆ ಖಂಡಿಸಿ ದಿಲ್ಲಿಯಲ್ಲಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ನೇತೃತ್ವದಲ್ಲಿ ಪ್ರತಿಭಟನೆ

ಬೆಂಗಳೂರು, ಸೆಪ್ಟೆಂಬರ್ 04, 2022 (www.justkannada.in): ಅಗತ್ಯವಸ್ತುಗಳ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರಕಾರದ ವಿರುದ್ಧ ಇಂದು ರಾಹುಲ್‌ ಗಾಂಧಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.

ದೆಹಲಿಯ ʻರಾಮ್‌ಲೀಲಾ ಮೈದಾನʼದಲ್ಲಿ ಪ್ರತಿಭಟನೆ ನಡೆಸಲು ಕಾಂಗ್ರೆಸ್ ತಯಾರಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ಸೂಕ್ತ ಭದ್ರತೆ ಕೈಗೊಳ್ಳಲಾಗಿದೆ.

ರಾಹುಲ್‌ ಗಾಂಧಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದ್ದು, ನೂರಾರು ಕಾಂಗ್ರೆಸ್‌ ಕಾರ್ಯಕರ್ತರು ಭಾಗಿಯಾಗುವ ಸಾಧ್ಯತೆಯಿದೆ. ರಾಜ್ಯದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಭಾಗಿಯಾಗಲಿದ್ದಾರೆ.

ರಾಮಲೀಲಾ ಮೈದಾನ ಮತ್ತು ಸುತ್ತಮುತ್ತ ಸಾಕಷ್ಟು ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.