ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಪ್ರತಿಭಟನಾ ಸಮಾವೇಶ: ಪ್ರಧಾನಿ ಮೋದಿ ವಿರುದ್ದ ಘೋಷಣೆ…

ಮಂಗಳೂರು,ಜ,15,2020(www.justkannada.in): ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ಆಯೋಜನೆ ಮಾಡಲಾಗಿದೆ.

ಮಂಗಳೂರಿನ  ಅಡ್ಯಾರ್ ಕಣ್ಣೂರು ಮೈದಾನದಲ್ಲಿ  ಮುಸ್ಲೀಂ ಕಮಿಟಿಯಿಂದ ಬೃಹತ್ ಪ್ರತಿಭಟನಾ ಸಮಾವೇಶ ನಡೆಯುತ್ತಿದ್ದು ಹಲವು ಗಣ್ಯರು ಭಾಗಿಯಾಗಿದ್ದಾರೆ. ಎರಡು ಬಾರಿ ಮುಂದೂಡಿಕೆಯಾಗಿದ್ದ ಪ್ರತಿಭಟನಾ ಸಮಾವೇಶ ಇಂದು ನಡೆಯುತ್ತಿದೆ.

ಪ್ರತಿಭಟನೆಯಲ್ಲಿ ಸಾವಿರಾರು ಮಂದಿ ಭಾಗಿಯಾಗಿದ್ದು ಪ್ರತಿಭಟನೆ  ವೇಳೆ ಪ್ರಧಾನಿ ಮೋದಿ ವಿರುದ್ದ ಘೋಷಣೆ ಕೂಗುತ್ತಿದ್ದಾರೆ.  ಸಮಾವೇಶ ಹಿನ್ನೆಲೆ ನಗರದಾದ್ಯಂತ ಬಿಗಿ ಭದ್ರತೆಗೆ 5 ಸಾವಿರ ಪೊಲೀಸರನ್ನ ನಿಯೋಜಿಸಲಾಗಿದೆ.

Key words: Protest – Mangalore- against -Citizenship Amendment Act