ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ಇಡಿ ನೋಟಿಸ್ ವಿರೋಧಿಸಿ ಮೈಸೂರಿನಲ್ಲಿ ಪ್ರತಿಭಟನೆ: ‘ಕೈ’ ಮುಖಂಡರು ವಶಕ್ಕೆ.

ಮೈಸೂರು,ಜೂನ್,17,2022(www.justkannada.in):  ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೆ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿರುವುದನ್ನ ವಿರೋಧಿಸಿ ಮೈಸೂರಿನಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಡಿಸಿ ಕಚೇರಿಯಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧೃವನಾರಾಯಣ್, ಮಾಜಿ ಸಚಿವ ಹೆಚ್.ಸಿ ಮಹದೇವಪ್ಪ, ಶಾಸಕರಾದ ಯತೀಂದ್ರ ಸಿದ‍್ಧರಾಮಯ್ಯ, ತನ್ವೀರ್ ಸೇಠ್ ಸೇರಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು.

ಈ ವೇಳೆ  ಕಾಂಗ್ರೆಸ್ ನಾಯಕರನ್ನ ಪೊಲೀಸರು ಮಾರ್ಗಮಧ್ಯೆ ತಡೆದಿದ್ದು, ಪ್ರತಿಭಟನಾಕಾರರು ರಸ್ತೆ ಮಧ್ಯೆ ಕುಳಿತು ಧರಣಿ ನಡೆಸಲು ಮುಂದಾದರು. ಈ ವೇಳೆ ಪೊಲೀಸರು ಪ್ರತಿಭಟನಾನಿರತ ಕಾಂಗ್ರೆಸ್ ನಾಯಕರನ್ನ ವಶಕ್ಕೆ ಪಡೆದರು.

Key words: Protest – Mysore-against-ED-notice – Sonia Gandhi-Rahul Gandhi