ರೈತರ ಜಮೀನುಗಳ ಮೇಲೆ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ವಿರೋಧಿಸಿ ಮೈಸೂರಿನಲ್ಲಿ ಪ್ರತಿಭಟನೆ..

ಮೈಸೂರು,ಫೆಬ್ರವರಿ,8,2021(www.justkannada.in):  ರೈತರ ಜಮೀನುಗಳ ಮೇಲೆ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ವಿರೋಧಿಸಿ ಮೈಸೂರಿನಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.jk

ಜಿಲ್ಲಾಧಿಕಾರಿ ಕಛೇರಿ ಬಳಿ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ರೈತರು ಆಕ್ರೋಶ ವ್ಯಕ್ತಪಡಿಸಿದರು.  ಪ್ರತಿಭಟನೆ ವೇಳೆ ಮಾತನಾಡಿದ ಬಡಗಲಪುರ ನಾಗೇಂದ್ರ, ರೈತ ಸಂಘಟನೆ ಎಂದಿಗೂ ಅಭಿವೃದ್ಧಿ ವಿರೋಧಿಯಲ್ಲ. ಅಭಿವೃದ್ಧಿ ಹೆಸರಿನಲ್ಲಿ ಫಲವತ್ತಾಗಿರುವ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.Protest – Mysore- against- National Highway- Construction – Farmers-' Lands

ಮೈಸೂರಿನ ಬಂಟ್ವಾಳದವರೆಗೆ ರಾಷ್ಟ್ರೀಯ ಹೆದ್ದಾರಿ 275 ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ಈಗಾಗಲೇ ಇರುವ ರಾಜ್ಯ ಹೆದ್ದಾರಿಗೆ ಪರ್ಯಾಯ ರಾಷ್ಟ್ರೀಯ ಹೆದ್ದಾರಿ 275 ಅವಶ್ಯಕತೆ ಇಲ್ಲ. ರೈತರೊಂದಿಗೆ ಚರ್ಚಿಸದೇ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ನಮ್ಮ ವಿರೋಧವಿದೆ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಿಂದ ಫಲವತ್ತಾಗಿರುವ 900 ಎಕರೆ ಕೃಷಿ ಭೂಮಿ ನಿರ್ನಾಮವಾಗಲಿದೆ. ಮೊದಲು ರೈತರಿಗೆ ಹೆದ್ದಾರಿಯ ಅವಶ್ಯಕತೆ ಕುರಿತು ಮನವರಿಕೆ ಮಾಡಿಕೊಡಿ. ಒಂದು ವೇಳೆ ಹೆದ್ದಾರಿ ನಿರ್ಮಾಣಕ್ಕೆ ಅದೇ ಭೂಮಿ ಅವಶ್ಯಕತೆ ಇದ್ದರೆ ಎಕರೆಗೆ 2 ಕೋಟಿ ಪರಿಹಾರ ನೀಡಬೇಕು ಎಂದು ಬಡಗಲಪುರ ನಾಗೇಂದ್ರ ಆಗ್ರಹಿಸಿದರು.

Key words: Protest – Mysore- against- National Highway- Construction – Farmers-‘ Lands