ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮೈಸೂರಿನಲ್ಲಿ ಪೌರಕಾರ್ಮಿಕರ ಪ್ರತಿಭಟನೆ…

ಮೈಸೂರು,ಆ,18,2020(www.justkannada.in):  ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಒತ್ತಾಯಿಸಿ ಮೈಸೂರು ಮಹಾನಗರ ಪಾಲಿಕೆ ಮುಂಭಾಗ ಪೌರಕಾರ್ಮಿಕರು ಪ್ರತಿಭಟನೆ ನಡೆಸಿದರು.jk-logo-justkannada-logo

ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಇಂದು ಧರಣಿ ನಡೆಸಿದ ಪೌರಕಾರ್ಮಿಕರು  ವೇತನ ತಾರತಮ್ಯ ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.  ಶೂನ್ಯ ಘನ ತ್ಯಾಜ್ಯ ಘಟಕದಲ್ಲಿ ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರನ್ನು ವಜಾಗೊಳಿಸಲಾಗಿದೆ. ವಜಾಗೊಳಿಸಿರುವ ಪೌರಕಾರ್ಮಿಕರನ್ನು ಕೂಡಲೇ ಕೆಲಸಕ್ಕೆ ನೇಮಿಸಿಕೊಳ್ಳಬೇಕು. ಅವರಿಗೆ ಬಾಕಿ ವೇತನ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.protest-mysore-city-corporation-labor-various-demands

ಹಾಗೆಯೇ ಶೂನ್ಯ ಘನತ್ಯಾಜ್ಯ ಘಟಕಗಳಲ್ಲಿ ಸ್ಥಳೀಯ ಜನಪ್ರತಿನಿಧಿಗಳಿಂದ ಅಕ್ರಮ ನಡೆಯುತ್ತಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಪೌರಕಾರ್ಮಿಕರು ಆಗ್ರಹಿಸಿದರು.

Key words: protest – Mysore city corporation- labor- various -demands.