ಪಶುವೈದ್ಯೆ ಮೇಲೆ ಅತ್ಯಾಚಾರ ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ: ಆರೋಪಿಗಳನ್ನ ಗಲ್ಲಿಗೇರಿಸುವಂತೆ ಆಗ್ರಹ…

ಮೈಸೂರು,ಡಿ,3,2019(www.justkannada.in):  ಹೈದರಾಬಾದ್ ನಲ್ಲಿ ಪಶುವೈದ್ಯೆ ಮೇಲಿನ ಅತ್ಯಾಚಾರ ಖಂಡಿಸಿ ಮೈಸೂರಿನಲ್ಲಿ ಗಂಧದಗುಡಿ ಫೌಂಡೇಶನ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿಅತ್ಯಾಚಾರ ಆರೋಪಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಗಂಧದ ಗುಡಿ ಫೌಂಡೇಶನ್ ಸದಸ್ಯರು ಅತ್ಯಾಚಾರಿಗಳನ್ನು ಗಲ್ಲಿಗೇರಿಸುವಂತೆ ಘೋಷಣೆ ಕೂಗಿದರು. ಹೈದರಾಬಾದ್ ನಲ್ಲಿ ನಡೆದಿರುವ ಈ ಕೃತ್ಯ ದೇಶವೇ ತಲೆ ತಗ್ಗಿಸುವಂತಾಗಿದೆ. ದೇಶಗಳಲ್ಲಿ ಈ ರೀತಿಯ ಪ್ರಕರಣಗಳು ಹೆಚ್ಚಾಗುತ್ತಿವೆ. ಅತ್ಯಾಚಾರ ಆರೋಪಿಗಳಿಗೆ ಸಾರ್ವಜನಿಕ ಸ್ಥಳಗಳಲ್ಲಿ ಕಠಿಣ ಶಿಕ್ಷೆ ವಿಧಿಸಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.

ಕಳೆದ  ಒಂದು ವಾರದ ಹಿಂದೆ ಹೈದರಾಬಾದ್ ನಲ್ಲಿ ಪಶುವೈದ್ಯೆ ಮೇಲೆ ನಾಲ್ವರು ಕಾಮುಕರು ಅತ್ಯಾಚಾರವೆಸಗಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ್ದರು. ನಂತರ ನಾಲ್ವರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದು ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.

Key words: Protest – Mysore – Condemnation-rape – veterinarian doctor -accused.