ರಫೆಲ್ ಬಗ್ಗೆ ಸುಳ್ಳು ಮಾಹಿತಿ ಮತ್ತು ಸುದ್ದಿ ಹಬ್ಬಿಸಿದ ಆರೋಪ: ರಾಹುಲ್ ಗಾಂಧಿ ಕ್ಷಮೆಯಾಚನೆಗೆ ಆಗ್ರಹಿಸಿ ಮೈಸೂರಿನಲ್ಲಿ ಪ್ರತಿಭಟನೆ…

ಮೈಸೂರು,ನ,16, 2019(www.justkannada.in): ರಫೆಲ್ ಒಪ್ಪಂದದ ಬಗ್ಗೆ ಸುಳ್ಳು ಮಾಹಿತಿ ಮತ್ತು ಸುಳ್ಳು ಸುದ್ದಿ ಹಬ್ಬಿಸಿದ ಕಾಂಗ್ರೆಸ್ ನಾಯಕ  ರಾಹುಲ್ ಗಾಂಧಿ ಹೇಳಿಕೆ ಖಂಡಿಸಿ ಇಂದು ಮೈಸೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಮೈಸೂರಿನ ಗಾಂಧಿ ವೃತ್ತದಲ್ಲಿ  ಚಾಮರಾಜ ಕ್ಷೇತ್ರದ ಶಾಸಕ ಎಲ್.ನಾಗೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ವಿರುದ್ಧ  ಪ್ರತಿಭಟನಾಕಾರರು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ವೇಳೆ ಮಾತನಾಡಿದ  ಶಾಸಕ ಎಲ್. ನಾಗೇಂದ್ರ, ಮೋದಿ ಬಗ್ಗೆ ಮಾತನಾಡಲು ಕಾಂಗ್ರೆಸ್ ನಾಯಕರಿಗೆ ಯಾವುದೇ ನೈತಿಕತೆ ಇಲ್ಲ. ಅನೇಕ ಹಗರಣದಲ್ಲಿ ಭಾಗಿಯಾಗಿರುವ ಕಾಂಗ್ರೆಸ್ ನಾಯಕರು ಆತ್ಮಾವಲೋಕನ ಮಾಡಿಕೊಳ್ಳಬೇಕು ಮೋದಿ ವಿರುದ್ಧ ರಾಹುಲ್ ಗಾಂಧಿ ಚೌಕಿದಾರ್ ಚೋರ್ ಹೈ ಎಂದಿದ್ದರು. ಈ ವಿಚಾರ ಕುರಿತು ರಾಹುಲ್ ಗಾಂಧಿಗೆ ಸುಪ್ರಿಂಕೋರ್ಟ್ ಛೀಮಾರಿ ಹಾಕಿದೆ. ಕೂಡಲೇ ರಾಹುಲ್ ಗಾಂಧಿ  ದೇಶದ ಜನತೆಯ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

ನಗರದ ಅಗ್ರಹಾರ ವೃತ್ತದ ಬಳಿಯೂ ಕೈ ನಾಯಕ ರಾಹುಲ್ ಗಾಂಧಿ ವಿರುದ್ದ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ರಾಹುಲ್ ಗಾಂಧಿ  ಕ್ಷಮೆಯಾಚಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿ ಕಾಂಗ್ರೆಸ್ ಪಕ್ಷದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Key words: Protest- Mysore – condemning-  Rahul Gandhi-  statement-Rafael