Thursday, August 6, 2026

BDA Apartments

Home Front Page ದೆಹಲಿಯ ಜೆಎನ್ ಯು ವಿದ್ಯಾರ್ಥಿಗಳ ಮೇಲಿನ ಹಲ್ಲೆ ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ…

ದೆಹಲಿಯ ಜೆಎನ್ ಯು ವಿದ್ಯಾರ್ಥಿಗಳ ಮೇಲಿನ ಹಲ್ಲೆ ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ…

ಮೈಸೂರು,ನ,22,2019(www.justkannada.in): ದೆಹಲಿಯ ಜೆಎನ್ ಯು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿರುವುದನ್ನ ಖಂಡಿಸಿ ಮೈಸೂರಿನಲ್ಲಿ ಪ್ರಗತಿಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ಜೆಎನ್ ಯು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದನ್ನ ಖಂಡಿಸಿ ನಗರದ ರಾಮಸ್ವಾಮಿ ಸರ್ಕಲ್ ನಲ್ಲಿ ಪ್ರಗತಿಪರ ಸಂಘಟನೆಗಳು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಜೆಎನ್ ಯು ನಲ್ಲಿ ಹೆಚ್ಚಿನ ಶುಲ್ಕ, ಮೂಲಭೂತ ಸೌಕರ್ಯಗಳನ್ನು ಒಳಗೊಂಡಂತೆ ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ವಿದ್ಯಾರ್ಥಿಗಳು ಪ್ರತಿಭಟನೆಗೆ ಇಳಿದಿದ್ದರು.

ಪ್ರತಿಭಟನೆಯಲ್ಲಿ ಭಾಗಿಯಾದ ವಿದ್ಯಾರ್ಥಿಗಳ ಮೇಲೆ ಪೋಲಿಸರು ದಾಳಿ ಮಾಡಿದ್ದು ಸರಿಯಲ್ಲ ಎಂದು ಪ್ರತಿಭಟನಾಕಾರರು ಕಿಡಿಕಾರಿದರು. ಧರಣಿಯಲ್ಲಿ ಪ್ರಗತಿಪರರು,ಮತ್ತು ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗಿಯಾಗಿದ್ದರು.

Key words: Protest – Mysore –condemns- attack – JNU students – Delhi