Wednesday, October 14, 2026

Dasara Wishes

Happy Dasara
Home Front Page ಮೈಸೂರು ವಿವಿ ಸಂಶೋಧಕರ ಸಂಘದಿಂದ ಪ್ರತಿಭಟನೆ.

ಮೈಸೂರು ವಿವಿ ಸಂಶೋಧಕರ ಸಂಘದಿಂದ ಪ್ರತಿಭಟನೆ.

ಮೈಸೂರು ವಿವಿ ಸಂಶೋಧಕರ ಸಂಘದಿಂದ ಪ್ರತಿಭಟನೆ puli

ಮೈಸೂರು,ನವೆಂಬರ್,27,2024 (www.justkannada.in): ಸಂಶೋಧನಾ ವಿದ್ಯಾರ್ಥಿಗಳ ಶಿಷ್ಯ ವೇತನ ಹೆಚ್ಚಳ ಮಾಡುವಂತೆ ಆಗ್ರಹಿಸಿ  ಮೈಸೂರು ವಿಶ್ವ ವಿದ್ಯಾನಿಲಯ ಸಂಶೋಧಕರ ಸಂಘದಿಂದ ಇಂದು ಪ್ರತಿಭಟನೆ ನಡೆಸಲಾಯಿತು.

ಮೈಸೂರಿನ ಕ್ರಾಫರ್ಡ್ ಹಾಲ್ ಮುಂಭಾಗ ಪ್ರತಿಭಟನೆ ನಡೆಸಿ ಮೈಸೂರು ವಿಶ್ವ ವಿದ್ಯಾನಿಲಯದ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಮೈಸೂರು ವಿಶ್ವ ವಿದ್ಯಾನಿಲಯ ಸಂಶೋಧಕರ ಸಂಘದ ಅಧ್ಯಕ್ಷ ಶಿವಶಂಕರ್, ಎಸ್ಸಿ ಎಸ್ಟಿ ವಿದ್ಯಾರ್ಥಿಗಳ ಶಿಷ್ಯ ವೇತನ ಹೆಚ್ಚಳ ಮಾಡಿಲ್ಲ. ಈ ಬಗ್ಗೆ ಕುಲಪತಿಗಳ ಗಮನಕ್ಕೆ ತಂದಿದ್ದೇವೆ. ಈವರೆಗೂ ಕುಲಪತಿಗಳು ಶಿಷ್ಯ ವೇತನ ಹೆಚ್ಚಳಕ್ಕೆ ಮುಂದಾಗಿಲ್ಲ. ಶಿಷ್ಯ ವೇತನ ಹೆಚ್ಚಳ ಮಾಡುವವರೆಗೂ ನಮ್ಮ ಪ್ರತಿಭಟನೆ ಮುಂದುವರೆಯುತ್ತದೆ. ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸುತ್ತವೆ ಎಂದು ಹೇಳಿದರು.

Key words: Protest, Mysore University, Researchers Association