ಮಾಜಿ ಸಚಿವ ಡಿ.ಕೆ ಶಿವಕುಮಾರ್ ಬಂಧನ ಖಂಡಿಸಿ ಪ್ರತಿಭಟನಾ ರ್ಯಾಲಿ: ಕಾಂಗ್ರೆಸ್,ಜೆಡಿಎಸ್ ನಾಯಕರು ಸೇರಿ ಸಾವಿರಾರು ಮಂದಿ ಭಾಗಿ…

ಬೆಂಗಳೂರು,ಸೆ.11,2019(www.justkannada.in):  ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನ ಜಾರಿ ನಿರ್ದೇಶನಾಲಯ ಬಂಧಿಸಿರುವುದನ್ನ ಖಂಡಿಸಿ ಒಕ್ಕಲಿಗರ ಸಮುದಾಯ ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸುತ್ತಿದೆ.

ನಗರದ ನ್ಯಾಷನಲ್ ಕಾಲೇಜು ಮೈದಾನದಿಂದ ಫ್ರೀಡಂಪಾರ್ಕ್ ವರೆಗೆ ನಡೆಯುತ್ತಿರುವ ಪ್ರತಿಭಟನಾ ರ್ಯಾಲಿ ಆರಂಭವಾಗಿದ್ದು, ಕಾಂಗ್ರೆಸ್, ಜೆಡಿಎಸ್ ನಾಯಕರು ಸೇರಿ ಸಾವಿರಾರು ಮಂದಿ ಪಾಲ್ಗೊಂಡಿದ್ದಾರೆ.  ಕನ್ನಡಪರ ಸಂಘಟನೆಗಳು, ಒಕ್ಕಲಿಗ ಸಮುದಾಯದ ಹಲವಾರು ಸಂಘಟನೆಗಳು, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ ಮೆರವಣಿಗೆಯಲ್ಲಿ ಭಾಗವಹಿಸಿವೆ.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕರಾದ ರಾಮಲಿಂಗರೆಡ್ಡಿ ಮಾಜಿ ಸಚಿವ ಕೃಷ್ಣಭೈರೇಗೌಡ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಶಾಸಕಿ ಸೌಮ್ಯರೆಡ್ಡಿ, ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಸೇರಿ ಹಲವು ನಾಯಕರು ಪಾಲ್ಗೊಂಡಿದ್ದಾರೆ.

Key words: protest -rally -condemning – arrest -former minister -DK Sivakumar-Congress- leaders