Saturday, September 26, 2026

BDA Apartments

Home Front Page ಕೇಂದ್ರದ ವಿರುದ್ದ ರಾಜ್ಯ  ಕಾಂಗ್ರೆಸ್ ನಾಯಕರಿಂದ ಪ್ರತಿಭಟನೆ: ಸುರ್ಜೇವಾಲ ಸೇರಿ ಹಲವರು ಭಾಗಿ.

ಕೇಂದ್ರದ ವಿರುದ್ದ ರಾಜ್ಯ  ಕಾಂಗ್ರೆಸ್ ನಾಯಕರಿಂದ ಪ್ರತಿಭಟನೆ: ಸುರ್ಜೇವಾಲ ಸೇರಿ ಹಲವರು ಭಾಗಿ.

ಬೆಂಗಳೂರು,ಏಪ್ರಿಲ್,23,2024 (www.justkannada.in):  ಬರಪರಿಹಾರ ವಿತರಣೆಯಲ್ಲಿ ರಾಜ್ಯಕ್ಕೆ ಕೇಂದ್ರ ಸರ್ಕಾರ ಅನ್ಯಾಯ ಮಾಡಿದೆ ಎಂದು ಆರೋಪಿಸಿ ರಾಜ್ಯ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು.

ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಸಿಎಂ ಸಿದ್ದರಾಮಯ್ಯ ,ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ನಾಯಕರು ಧರಣಿ ನಡೆಸಿದರು. ಪ್ರತಿಭಟನೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸಚಿವರು ಬೆಂಗಳೂರಿನ ಕಾಂಗ್ರೆಸ್ ಶಾಸಕರು ಎಂಎಲ್ ಸಿಗಳು ಭಾಗಿಯಾಗಿದ್ದರು.ಕೇಂದ್ರದ ವಿರುದ್ದ ರಾಜ್ಯ ಕಾಂಗ್ರೆಸ್ ನಾಯಕರಿಂದ ಪ್ರತಿಭಟನೆ congress-protest congress protest

ಬರಪರಿಹಾರ ವಿತರಣೆಯಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡಿದೆ. ತಕ್ಷಣವೇ ಬರಪರಿಹಾರ ಬಿಡುಗಡೆ ಮಾಡುವಂತೆ ಆಗ್ರಹಿಸಿದರು. ಮೋದಿ ಕರ್ನಾಟಕಕ್ಕೆ ಕೊಟ್ಟಿದ್ದು ಖಾಲಿ ಚೊಂಬು.  ಚೊಂಬೇಶ್ವರ ಎಂದು ಘೋಷಣೆ ಕೂಗಿ ಪ್ರತಿಭಟನಾನಿರತ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದರು.

Key words: Protest, state, Congress, leaders