ಡಾ. ಬಿ.ಆರ್ ಅಂಬೇಡ್ಕರ್ ಭವನ ಕಾಮಗಾರಿ ಪೂರ್ಣಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ

ಮೈಸೂರು,ಅಕ್ಟೊಂಬರ್,01,2020(www.justkannada.in) :  ಡಾ.ಬಿ.ಆರ್.ಅಂಬೇಡ್ಕರ್ ಭವನದ ಕಾಮಗಾರಿ ಶೀಘ್ರವೇ ಪೂರ್ಣಗೊಳಿಸುವಂತೆ ಒತ್ತಾಯಿಸಿ ಜೈಭೀಮ್ ದಲಿತ ಆದಿ ದ್ರಾವಿಡ ಯುವಕರ ಅಭಿವೃದ್ಧಿ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.jk-logo-justkannada-logoನಗರದ ರೋಟರಿ ಶಾಲೆಯ ರಸ್ತೆಯಲ್ಲಿರುವ ನಲ್ಲಪ್ಪ ಸಂಚಾರಿ ಪೊಲೀಸ್ ಠಾಣೆಯ ಪಕ್ಕದಲ್ಲಿ ಅಂಬೇಡ್ಕರ್ ಭವನದ ಬಳಿ ಜಮಾವಣೆಗೊಂಡ ಪ್ರತಿಭಟನಕಾರರು ಕಾಮಗಾರಿ ಪೂರ್ಣಗೊಳಿಸುವಂತೆ ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶವ್ಯಕ್ತಪಡಿಸಿದರು.Protest-against-completion-Ambedkar Bhavan-Worksಈ ಸಂದರ್ಭ ಸಂಘದ ಅಧ್ಯಕ್ಷ ಎಸ್.ಆರ್.ಪ್ರವೀಣ್ ಕುಮಾರ್ ಮಾತನಾಡಿ, ನಿರ್ಮಾಣ ಹಂತದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನ ಸುಮಾರು 10ವರ್ಷಗಳ ಮೊದಲೇ ಪೂರ್ಣಗೊಳ್ಳಬೇಕಾಗಿತ್ತು. ಸರ್ಕಾರಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಇನ್ನೂ ಸಹ ಪೂರ್ಣಗೊಳ್ಳದೇ ನಿಂತಿದೆ ಎಂದು ಆರೋಪಿಸಿದರು.

ಇದು ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಮಹಾನಾಯಕರಿಗೆ ಮಾಡುತ್ತಿರುವ ಅವಮಾನವಾಗಿದೆ. ತಕ್ಷಣ ಈ ಭವನವನ್ನು ಪೂರ್ಣಗೊಳಿಸಿ ಅಗತ್ಯ ಕ್ರಮಗಳಿಗೆ ಉಪಯೋಗಿಸುವಂತೆ ಮಾಡಬೇಕು. ಅಂಬೇಡ್ಕರ್ ಅವರ 130ನೇ ಜನ್ಮದಿನದ ಒಳಗಾಗಿ ಲೋಕಾರ್ಪಣೆ ಮಾಡಬೇಕೆಂದು ಜಿಲ್ಲಾಡಳಿತವನ್ನು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಹರೀಶ್, ಎಸ್.ಕುಮಾರ್, ಕೆ.ವರದರಾಜು, ರವಿಶಂಕರ್, ಗಜೇಂದ್ರ ಸೇರಿದಂತೆ ಅನೇಕರು ಭಾಗವಹಿಸಿದ್ದರು.

key words : Protest-against-completion-Ambedkar Bhavan-Works