ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರುದ್ಧ ಪ್ರತಿಭಟನೆ

ಮೈಸೂರು,ನವೆಂಬರ್,05,2020(www.justkannada.in) : ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.jk-logo-justkannada-logo

ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾವಣೆಗೊಂಡ ಪ್ರತಿಭಟನಾಕಾರರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶವ್ಯಕ್ತಪಡಿಸಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತರಲು ಹೊರಟಿರುವ ಕೆಲ ಕಾಯಿದೆಗಳು ರೈತರಿಗೆ ಮರಣ ಶಾಸನವಾಗಿದೆ. ಭೂ ಸುಧಾರಣೆ ಕಾಯ್ದೆಯಿಂದ ರೈತರು ತಮ್ಮ ಜಮೀನುಗಳನ್ನು ಮೂರು ಕಾಸಿಗೆ ಮಾರಿ ಕೊನೆಗೆ ಆಳಾಗಿ ದುಡಿಯುವ ಆತಂಕ ಎದುರಾಗಿದೆ ಎಂದು ಆಕ್ರೋಶವ್ಯಕ್ತಪಡಿಸಿದರು.

ಮೋದಿ ಹಾಗೂ ಯಡಿಯೂರಪ್ಪ ವಿರುದ್ಧ ಘೋಷಣೆ ಕೂಗಿ ಕಾಯ್ದೆ ಹಿಂಪಡೆಯುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.Protest-Against-Land-Reform-Act-Amendment

key words : Protest-Against-Land-Reform-Act-Amendment