ಭಾರತ್ ಬಂದ್ ಗೆ ಬೆಂಬಲಿಸಿ ಮೈಸೂರಿನಲ್ಲಿ ‘ಕೈ’ ಮುಖಂಡರಿಂದ ಪ್ರತಿಭಟನೆ

ಮೈಸೂರು,ಡಿಸೆಂಬರ್,08,2020(www.justkannada.in) : ಕೇಂದ್ರ ಸರ್ಕಾರದ ಕೃಷಿ ಮಸೂದೆ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ ಗೆ ಬೆಂಬಲಿಸಿ ಲಷ್ಕರ್ ಪೋಲಿಸ್ ಠಾಣೆ ಬಳಿ ಅಂಚೆಕಚೇರಿ ಎದುರು ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿದರು.

ಈ ಸಂದರ್ಭ  ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಕಾರ್ಯಕರ್ತರು. ಎಸ್.ಬಿ.ಐ ಬ್ಯಾಂಕ್ ಕಚೇರಿಗೆ ತೆರಳಿ ಬಾಗಿಲು ಮುಚ್ಚಿ ರೈತರಿಗೆ ಬೆಂಬಲ ನೀಡುವಂತೆ ಬ್ಯಾಂಕ್ ಸಿಬ್ಬಂದಿಗೆ ಮನವಿ ಮಾಡಿದರು. ಕಾಂಗ್ರೆಸ್ ಕಾರ್ಯಕರ್ತರ ಮನವಿಗೆ ಸ್ಪಂದಿಸಿ ಬ್ಯಾಂಕ್  ಸಿಬ್ಬಂದಿ ಬಾಗಿಲು ಮುಚ್ಚಿದರು.

ಮಾಜಿ ಶಾಸಕ ಎಂ.ಕೆ.ಸೋಮಶೇಖರ್, ಕಾಂಗ್ರೆಸ್ ನಗರಾಧ್ಯಕ್ಷ ಆರ್.ಮೂರ್ತಿ, ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾಥ್  ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕೇಂದ್ರ ಸರ್ಕಾರದ ರೈತ ವಿರೋಧಿ ಕಾಯ್ದೆ ಹಿಂಪಡೆಯುವಂತೆ ಒತ್ತಾಯಿಸಿ ಸಾಮೂಹಿಕ ನಾಯಕತ್ವದ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಅರಬೆತ್ತಲೆ‌ ಪ್ರತಿಭಟನೆ ನಡೆಸಲಾಯಿತು.

ನಗರದ ಗನ್ ಹೌಸ್ ವೃತ್ತದಲ್ಲಿ  ರೈತ ಮುಖಂಡ ವಿದ್ಯಾಸಾಗರ್ ಹಾಗೂ ಮಂಜು ಕಿರಣ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.  ಪ್ರತಿಭಟನೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ದ  ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

key words : Protest-Congress-leaders-support-Bharat-Bandh