ಹತ್ರಾಸ್ ನಲ್ಲಿ ಯುವತಿ ಮೇಲೆ ಅತ್ಯಾಚಾರ ಕೊಲೆ ಕೇಸ್: ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಪ್ರತಿಭಟನೆ

ಮೈಸೂರು,ಅಕ್ಟೊಂಬರ್,01,2020(www.justkannada.in) : ಉತ್ತರಪ್ರದೇಶದಲ್ಲಿ ದಲಿತ ಯುವತಿಯ ಮೇಲೆ ನಡೆದ ಅತ್ಯಾಚಾರ, ಅಮಾನುಷ ಕೃತ್ಯ ಖಂಡಿಸಿ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ನಾಯಕರ ಹಿತರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಯಿತು.jk-logo-justkannada-logo

ನಗರದ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಜಮಾವಣೆಗೊಂಡ ಪ್ರತಿಭಟನಕಾರರು ತಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶವ್ಯಕ್ತಪಡಿಸಿದರು.

ವೇದಿಕೆ ರಾಜ್ಯಾಧ್ಯಕ್ಷ ದ್ಯಾವಪ್ಪ ನಾಯಕ ಮಾತನಾಡಿ, ಉತ್ತರಪ್ರದೇಶದ ಹತ್ರಾಸ್ ನಲ್ಲಿ ಯುವತಿಯ ಮೇಲೆ ಕ್ರೂರವಾಗಿ ಅತ್ಯಾಚಾರ ನಡೆಸಿ ಆಕೆಯ ಸಾವಿಗೆ ಕಾರಣರಾದ ದುಷ್ಕರ್ಮಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಎಂದರು.

 

ಯುಪಿ ಸರ್ಕಾರ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ದುಷ್ಕರ್ಮಿಗಳನ್ನು ಪತ್ತೆ ಹಚ್ಚಿಲ್ಲ. ಶ್ರೀಮಂತರಿಗೆ ಒಂದು ನ್ಯಾಯ, ಬಡವರಿಗೆ ಒಂದು ನ್ಯಾಯವಾ? ಶೀಘ್ರವಾಗಿ ಅತ್ಯಾಚಾರಿಗಳನ್ನು ಪತ್ತೆ ಹಚ್ಚಿ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಪ್ರಭಾಕರ್ ಹುಣಸೂರು, ಪಡುವಾರಹಳ್ಳಿ ರಾಮಕೃಷ್ಣ, ಶ್ರೀಧರ್ ಚಾಮುಂಡಿಬೆಟ್ಟ, ರಾಜು ಮಾರ್ಕೆಟ್, ಹೆಚ್.ಆರ್.ಪ್ರಕಾಶ್, ಮಾದೇಶ ಕೆರೆಹಳ್ಳಿ, ರಘು ಮತ್ತಿತರರು ಪಾಲ್ಗೊಂಡಿದ್ದರು.

key words :protest-demanding-harsh-punishment-rapists