ಅವೈಜ್ಞಾನಿಕ ವಿದ್ಯುತ್ ದರ ಏರಿಕೆ ಖಂಡಿಸಿ ಪ್ರತಿಭಟನೆ

ಮೈಸೂರು,ನವೆಂಬರ್,07,2020(www.justkannada.in) : ಅವೈಜ್ಞಾನಿಕ ವಿದ್ಯುತ್ ದರ ಏರಿಕೆ ಖಂಡಿಸಿ ಮೈಸೂರು ಕನ್ನಡ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.jk-logo-justkannada-logoನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಶನಿವಾರ ಜಮಾವಣೆಗೊಂಡ ಸದಸ್ಯರು ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಸರಕಾರದ ವಿರುದ್ಧ ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶವ್ಯಕ್ತಪಡಿಸಿದರು.

ಈ ವೇಳೆ ವೇದಿಕೆಯ ಅಧ್ಯಕ್ಷ ಎಸ್.ಬಾಲಕೃಷ್ಣ ಮಾತನಾಡಿ, ಸರ್ಕಾರ ಅವೈಜ್ಞಾನಿಕವಾಗಿ ವಿದ್ಯುತ್ ದರ ಏರಿಕೆ ಮಾಡಿರುವುದು ಸರಿಯಲ್ಲ. ಈಗಾಗಲೇ, ಕೊರೊನಾದಿಂದ ರಾಜ್ಯದ ಜನರು ಆರ್ಥಿಕವಾಗಿ ಸಂಕಷ್ಟ ಅನುಭವಿಸುತ್ತಿದ್ದಾರೆ. ನಗರ ಪ್ರದೇಶದ ಬಹುಪಾಲು ವ್ಯಾಪಾರಸ್ಥರು,ಉದ್ಯಮಿಗಳು ನಿರ್ವಹಣೆ ಮಾಡಲಾಗದೇ ಅಂಗಡಿಗಳನ್ನು ಮುಚ್ಚಿದ್ದಾರೆ ಎಂದು ಬೇಸರವ್ಯಕ್ತಪಡಿಸಿದರು.

ಇಂಥಹ ಸಂದರ್ಭದಲ್ಲಿ ಸರ್ಕಾರ ಏಕಾಏಕಿ ವಿದ್ಯುತ್ ದರ ಹೆಚ್ಚಳ ಮಾಡಿರುವುದು ಸರಿಯಲ್ಲ. ಈ ನಿರ್ಧಾರವು ಜನಪರವಾಗಿಲ್ಲ. ಈ ಸರ್ಕಾರವು ಜನದ್ರೋಹಿ ಸರ್ಕಾರವಾಗಿದೆ ಎಂದು ಆಕ್ರೋಶವ್ಯಕ್ತಪಡಿಸಿದರು.

ಸರಳ ದಸರಾ ಹೆಸರಿನಲ್ಲಿ ದುಂದು ವೆಚ್ಚ ಮಾಡುವ ಈ ಸರ್ಕಾರ ಜನಸಾಮಾನ್ಯರ ಮೇಲೆ ಆರ್ಥಿಕ ಗದಾಪ್ರಹಾರ ಮಾಡುವುದು ಎಷ್ಟರ ಮಟ್ಟಿಗೆ ಸರಿ? ಎಂದು ಪ್ರಶ್ನಿಸಿದರು. ಕೂಡಲೇ ಈ ಜನವಿರೋಧಿ ನಿರ್ಧಾರವನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.

 Protest-protesting-unscientific-power-hikeಪ್ರತಿಭಟನೆಯಲ್ಲಿ ರವಿ, ಸಿದ್ದೇಗೌಡ, ಗುರುಬಸಪ್ಪ, ಬಾಬು, ಗೋಪಿ, ಸುನೀಲ್, ಅರವಿಂದ, ಚಂದ್ರ ಇತರರು ಭಾಗವಹಿಸಿದ್ದರು.

 

key words : Protest-protesting-unscientific-power-hike