ಡಿ.ಗ್ರೂಪ್ ನೌಕರರನ್ನ ಕೆಲಸದಿಂದ ವಜಾಮಾಡದಂತೆ ಒತ್ತಾಯಿಸಿ ಮೈಸೂರಿನಲ್ಲಿ ಪ್ರತಿಭಟನೆ..

ಮೈಸೂರು,ಜೂ,20,2019(www.justkannada.in): ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಡಿ.ಗ್ರೂಪ್ ನೌಕರರನ್ನ ಕೆಲಸದಿಂದ ವಜಾ ಮಾಡದಂತೆ ಒತ್ತಾಯಿಸಿ  ಎಐಯುಟಿಯುಸಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಇಲಾಖೆ ಹೊರಗುತ್ತಿಗೆ ಆಧಾರದಲ್ಲಿ  ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರೋ ಡಿ ಗ್ರೂಪ್ ನೌಕರರನ್ನು ಕೆಲಸದಿಂದ ಬಿಡುಗಡೆಗೊಳಿಸುತ್ತಿದ್ದಾರೆ. ಮುಖ್ಯಮಂತ್ರಿಗಳು ಇವರನ್ನ ಕೆಲಸದಿಂದ ತೆಗೆದು ಹಾಕುವುದಿಲ್ಲವೆಂದು ಭರವಸೆ ನೀಡಿದ್ದರು. ಆದರೆ ಇಲಾಖೆ ಇದನ್ನು ಪರಿಗಣಿಸದೆ ನೌಕರರನ್ನು ಕೆಲಸದಿಂದ ವಜಾಗೊಳಿಸುತ್ತಿದ್ದಾರೆ. ಈ ಕ್ರಮ ಸರಿಯಲ್ಲ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.

ಇಲಾಖೆಯಲ್ಲಿ ಕೆಲಸ ಮಾಡುತ್ತಿರುವವರು ಅತ್ಯಂತ ಬಡವರು ಮತ್ತು ಮಹಿಳೆಯರೆ ಹೆಚ್ಚಾಗಿದ್ದಾರೆ. ಈ ಕೂಡಲೇ ಸರ್ಕಾರ ಗಮನ ಹರಿಸಿ ಬಡ ನೌಕರರನ್ನು ಕೆಲಸದಿಂದ ತೆಗೆಯದಂತೆ ಆದೇಶ ನೀಡಬೇಕು ಎಂದು ಒತ್ತಾಯಿಸಿದರು.

Key words: Protests – Mysore- demanding – Don’t be dismiss-D.Group- employees