ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ಖಂಡಿಸಿ ಪ್ರತಿಭಟನೆ, ಆಕ್ರೋಶ

ಮಂಡ್ಯ,ಸೆಪ್ಟಂಬರ್,8,2025 (www.justkannada.in): ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ  ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲುತೂರಾಟ  ನಡೆಸಿದ್ದು ಇದನ್ನ ಖಂಡಿಸಿ ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ.

ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಚನ್ನೇಗೌಡ ಬಡಾವಣೆಯಲ್ಲಿ ಕೂರಿಸಿದ್ದ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯ ವೇಳೆಯಲ್ಲಿ ಕಲ್ಲು ತೂರಾಟ ನಡೆದಿದೆ.  ರಾತ್ರಿ ನಡೆದ ಘಟನೆಯಿಂದ ಪ್ರಕ್ಷುಬ್ಧ ವಾತಾವರಣವಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಮದ್ದೂರು ಪಟ್ಟಣದಲ್ಲಿ ಬಿಗಿ ಪೊಲೀಸ್ ಭದ್ರತೆ ನೀಡಲಾಗಿದೆ. 144 ಸೆಕ್ಷನ್ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಇನ್ನು ಕಲ್ಲುತೂರಾಟ ಖಂಡಿಸಿ ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು, ಸಾವಿರಾರು ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಜಮಾಯಿಸಿದ್ದಾರೆ.  ಕಂಬದಲ್ಲಿ ಕಟ್ಟಿರುವ ಹಸಿರು ಬಾವುಟಗಳನ್ನ ಕಿತ್ತೆಸೆದು ಪ್ರತಿಭಟನಾಕಾರರು ಆಕ್ರೋಶ ಹೊರ ಹಾಕಿದ್ದಾರೆ

Key words: Protests, outrage, stone-pelting, Ganesha immersion