ಬೆಂಗಳೂರಿನಲ್ಲಿ ಏರ್ ಶೋ ನಡೆಯುತ್ತಿರುವುದು ನಮ್ಮ ಹೆಮ್ಮೆ- ಸಿಎಂ ಬಿಎಸ್ ವೈ…

ಬೆಂಗಳೂರು, ಫೆಬ್ರವರಿ,3,2021(www.justkannada.in): ಬೆಂಗಳೂರಿನಲ್ಲಿ ಏರ್ ಶೋ ನಡೆಯುತ್ತಿರುವುದು ನಮ್ಮ ಹೆಮ್ಮೆ ಎಂದು  ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದರು. jk

ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯುತ್ತಿರುವ ಏರ್ ಶೋಗೆ  ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಿದ್ದಾರೆ.proud -Air Show -Bangalore CM BS Yeddyurappa

ಏರೋ ಇಂಡಿಯಾ ಶೋ ಉದ್ಘಾಟನೆ ಬಳಿಕ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ,  ಪ್ರಧಾನಿ ನರೇಂದ್ರ ಮೋದಿ ಆತ್ಮನಿರ್ಭರ ಭಾರತದ ಕನಸು ಕಂಡಿದ್ದಾರೆ. ಅದಕ್ಕೆ ಪೂರಕವಾಗಿ ಕರ್ನಾಟಕವೂ ನಡೆದುಕೊಳ್ಳುತ್ತಿದೆ. ಭಾರತದ ಶೇ. 65 ರಷ್ಟು ಯುದ್ಧ ವಿಮಾನಗಳು ಕರ್ನಾಟಕದಲ್ಲೇ ಸಿದ್ಧವಾಗುತ್ತಿವೆ. ದೇವನಹಳ್ಳಿಯಲ್ಲಿ 1 ಸಾವಿರ ಎಕರೆ ವಿಸ್ತೀರ್ಣದ ಏರೋಸ್ಪೇಸ್ ಪಾರ್ಕ್ ಸಿದ್ಧವಾಗುತ್ತಿದೆ ಎಂದು ಹೇಳಿದರು.

Key words: proud -Air Show -Bangalore CM BS Yeddyurappa